ರಾಜ್ಯ

ಯಾದಗಿರಿ: ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯ ಬರ್ಬರ ಹತ್ಯೆ, ಐವರ ಬಂಧನ

ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದಿದೆ.

ಯಾದಗಿರಿ: ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯ ಬರ್ಬರ ಹತ್ಯೆ, ಐವರ ಬಂಧನ
ಮಹೇಶ್ ಕನಕಟ್ಟಿ
Published On :

ಯಾದಗಿರಿ: ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಜೂನ್ 5 ರಂದು ಶಹಾಪುರ ಪಟ್ಟಣದ ಮೋಟಗಿ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಅರಣ್ಯ ಅಧಿಕಾರಿ ಮಹೇಶ್ ಕನಕಟ್ಟಿ ಅವರನ್ನು ಕೊಲೆ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಐವರನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಗಳನ್ನು ರಾಜು, ರೇಖು ನಾಯಕ್, ತಾರಾ ಸಿಂಗ್, ನರಸಿಂಗ್ ಮತ್ತು ಪ್ರಕಾಶ್ ಎಂದು ಗುರುತಿಸಲಾಗಿದೆ.

ಈ ಐವರ ಗ್ಯಾಂಗ್​ ಬಾರ್ & ರೆಸ್ಟೋರೆಂಟ್​ನಲ್ಲಿ ಕುಡಿದು ಕೂಗಾಡಿದ್ದಾರೆ. ಇದನ್ನು ಪ್ರಶ್ನಿಸಿದಕ್ಕೆ ಮಹೇಶ್ ಕಣಕಟ್ಟಿ ಮೇಲೆ ಏಕಾಏಕಿ ಕಟ್ಟಿಗೆಯಿಂದ ದಾಳಿ ಮಾಡಿದ್ದಾರೆ. ಬಡಿಗೆಯಿಂದ ಬಡಿದು, ಕಾಲಿನಿಂದ ಒದ್ದು ಕೊಲೆ ಮಾಡಿದ್ದಾರೆ. ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಮರುದಿನ ರೆಸ್ಟೋರೆಂಟ್‌ ಬಳಿ ಬಿಸಾಡಿದ್ದ ಮಹೇಶ್ ಅವರ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಈ ನಡುವೆ ಮೃತ ಮಹೇಶ್ ಪತ್ನಿ ಕೊಲೆ ಆರೋಪ ಮಾಡಿದ್ದರು. ಇದರಿಂದ ಅನುಮಾನಗೊಂಡ ಪೊಲೀಸರು ರೆಸ್ಟೋರೆಂಟ್‌ನ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಕೊಲೆ ಮಾಡಿರುವುದು ಗೊತ್ತಾಗಿದೆ.

ಬಳಿಕ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು ಆರೋಪಿಗಳನ್ನು ಗುರುತಿಸಿ ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.