ಚಿನ್ಮಯಾನಂದ ಸ್ವಾಮೀಜಿ ಬರ್ಬರ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಸ್ವಾಮೀಜಿಯೊಬ್ಬರ ಕೊಲೆಯಾಗಿರುವ ಘಟನೆ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿ ನಡೆದಿದೆ.

ಕೋಲಾರ: ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಸ್ವಾಮೀಜಿಯೊಬ್ಬರ ಕೊಲೆಯಾಗಿರುವ ಘಟನೆ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿ ನಡೆದಿದೆ.
ಘಟನೆ ಸಂಬಂಧ ಆಚಾರ್ಯ ಧರ್ಮಪ್ರಾಣಾನಂದ, ಪ್ರಾಣೇಶ್ವರಾನಂದ ಹಾಗೂ ಅರುಣ್ ಕುಮಾರ್ ಎಂಬ ಮೂವರು ಆರೋಪಿಗಳನ್ನು ಮಾಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಬೆಳಗ್ಗೆ ಮಾಲೂರಿನ ಸಂತಳ್ಳಿ ಗೇಟ್ ಬಳಿಯ ಆಶ್ರಮದಲ್ಲಿ ಸ್ನಾನ ಮಾಡುತ್ತಿದ್ದ ಚಿನ್ಮಯಾನಂದ ಸ್ವಾಮೀಜಿ ಅವರನ್ನು ಹೊರಗೆ ಎಳೆದುಕೊಂಡು ಬಂದ ಆರೋಪಿಗಳು ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸ್ವಾಮೀಜಿಯನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೆ ಸ್ವಾಮೀಜಿ ಮೃತಪಟ್ಟಿದ್ದಾರೆ. ಘಟನೆ ಬಳಿಕ ಆಶ್ರಮ ಹಾಗೂ ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭೇಟಿ ನೀಡಿ ಪರಿಶೀಲಿಸಿದರು.
ಆಶ್ರಮಕ್ಕೆ ಸೇರಿದ ಪಾಲಿಟೆಕ್ನಿಕಲ್ ಕಾಲೇಜು ಸಂಬಂಧ ಚಿನ್ಮಯಾನಂದ ಮತ್ತು ಧರ್ಮಪ್ರಾಣಾನಂದ, ಪ್ರಾಣೇಶ್ವರಾನಂದ, ಅರುಣ್ ಕುಮಾರ್ ಗುಂಪುಗಳ ನಡುವೆ ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ವ್ಯಾಜ್ಯ ನಡೆಯುತ್ತಿದೆ. ಇದೇ ವಿಚಾರವಾಗಿ ಹಿಂದೆಯೂ ಎರಡು ಗುಂಪುಗಳ ನಡುವೆ ಹಲವು ಬಾರಿ ಗಲಾಟೆ ನಡೆದಿತ್ತು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ 30ಕ್ಕೂ ಹೆಚ್ಚು ಪ್ರಕರಣಗಳು ಸಹ ದಾಖಲಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



