ಕುಶಾಲನಗರ: ಪಾರ್ಟಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ; ಉದ್ಯಮಿ ಕಾಲಿಗೆ ಗುಂಡೇಟು
ಗುಂಡಿನ ದಾಳಿ ನಡೆಸಿದ ಪ್ರಕರಣದಲ್ಲಿ ಕುಶಾಲನಗರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಭಾನುವಾರ ಮಧ್ಯರಾತ್ರಿಯಲ್ಲಿ ಘಟನೆ ನಡೆದಿದೆ. ಕುಶಾಲನಗರದ ಉದ್ಯಮಿಯೊಬ್ಬರು ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಡಿಕೇರಿ: ಗುಂಡಿನ ದಾಳಿ ನಡೆಸಿದ ಪ್ರಕರಣದಲ್ಲಿ ಕುಶಾಲನಗರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಭಾನುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಕುಶಾಲನಗರದ ಉದ್ಯಮಿಯೊಬ್ಬರು ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಶಾಲನಗರದ ಉದ್ಯಮಿ ಶಶಿಕುಮಾರ್ (40) ಗಾಯಗೊಂಡವರು. ಆರೋಪಿಗಳಾದ ಕುಶಾಲನಗರದ ಅನುದೀಪ್ (40) ಮತ್ತು ಲವಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಆರೋಪಿಯು ಶಶಿಕುಮಾರ್ ಮೇಲೆ ಏಳು ಗುಂಡುಗಳನ್ನು ಹಾರಿಸಿದ್ದು ಆತನ ಕಾಲಿಗೆ ಗಾಯಗಳಾಗಿವೆ. ಹುಟ್ಟುಹಬ್ಬದ ಪಾರ್ಟಿಯಲ್ಲಿ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಈ ಘಟನೆ ನಡೆದಿದೆ. ಮಧ್ಯರಾತ್ರಿ ಶಶಿಕುಮಾರ್ ಸ್ಥಳದಿಂದ ತೆರಳಿದ್ದರು ಎನ್ನಲಾಗಿದೆ. ಆದರೆ, ಅನುದೀಪ್ ಮತ್ತು ಅವರ ಸ್ನೇಹಿತ ಲವಕುಮಾರ್ ಅವರನ್ನು ಹಿಂಬಾಲಿಸಿಕೊಂಡು ಅವರ ಮನೆಗೆ ತೆರಳಿದ್ದಾರೆ.

ಬೆಂಗಳೂರು: ಕೊಲೆ ಆರೋಪಿ ಕಾಲಿಗೆ ಗುಂಡೇಟು
ಶಶಿಕುಮಾರ್ ಮನೆಯ ಹೊರಗೆ ಡಬಲ್ ಬ್ಯಾರಲ್ ಗನ್ ಹಿಡಿದುಕೊಂಡಿದ್ದ ಆರೋಪಿ ಅನುದೀಪ್ ಶಶಿಕುಮಾರ್ ಅವರ ವಾಹನದ ಮೇಲೆ ಗುಂಡು ಹಾರಿಸಿದ್ದಾನೆ. ಸಂತ್ರಸ್ತರ ವಾಹನಕ್ಕೆ ಏಳು ಗುಂಡುಗಳು ಹಾರಿದ್ದು, ಒಂದು ಗುಂಡು ಬಾಗಿಲಿಗೆ ತೂರಿಕೊಂಡು ಶಶಿಕುಮಾರ್ ಅವರ ಕಾಲಿಗೆ ಗಾಯವಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೇ ವೇಳೆ ಕುಶಾಲನಗರ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಲವಕುಮಾರ್‌ನನ್ನು ಬಂಧಿಸಿದ್ದಾರೆ. ಆದರೆ, ಅನುದೀಪ್ ಸ್ಥಳದಿಂದ ಪರಾರಿಯಾಗಿದ್ದ.
ಸೋಮವಾರ ಬೆಳಗ್ಗೆ ಕುಶಾಲನಗರ ಪೊಲೀಸರು ಕೊಪ್ಪದ ಹೋಂಸ್ಟೇಯಲ್ಲಿ ಅನುದೀಪ್‌ನನ್ನು ಬಂಧಿಸಿದ್ದಾರೆ. ಇಬ್ಬರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ. ಘಟನಾ ಸ್ಥಳಕ್ಕೆ ಎಸ್ಪಿ ಕೆ.ರಾಮರಾಜನ್, ಡಿವೈಎಸ್ಪಿ ಗಂಗಾಧರಪ್ಪ ಮತ್ತಿತರರು ಭೇಟಿ ನೀಡಿದ್ದರು. ಎಸ್ಪಿ ಕೆ ರಾಮರಾಜನ್ ಮತ್ತು ಕುಶಾಲನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಪರಾಧದ ವಿವರಗಳನ್ನು ಸಂಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


