ನಟ ಪ್ರಥಮ್, ಉಮಾಪತಿಗೆ ಅವಾಚ್ಯ ಪದಗಳಿಂದ ನಿಂದನೆ: ಕ್ಷಮೆ ಕೇಳಿದ ದರ್ಶನ್ ಅಭಿಮಾನಿ!
ದರ್ಶನ್ ವಿರುದ್ಧ ಹೇಳಿಕೆ ಆರೋಪದಲ್ಲಿ ನಟ ಪ್ರಥಮ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ ದರ್ಶನ್ ಅಭಿಮಾನಿ ಕೊನೆಗೂ ಕ್ಷಮೆ ಕೇಳಿದ್ದಾನೆ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ವಿಚಾರಣೆಗೆ ನಟ ದರ್ಶನ್ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿದ್ದಾಗ ಹೊರಗಡೆ ಜಮಾಯಿಸಿದ್ದ ಕೆಲ ಅಭಿಮಾನಿಗಳು ರಂಪ ರಾದ್ದಾಂತ ಮಾಡಿದ್ದರು. ಈ ವೇಳೆ ದರ್ಶನ್ ವಿರುದ್ಧ ಹೇಳಿಕೆ ಆರೋಪದಲ್ಲಿ ನಟ ಪ್ರಥಮ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ ದರ್ಶನ್ ಅಭಿಮಾನಿ ಕೊನೆಗೂ ಕ್ಷಮೆ ಕೇಳಿದ್ದಾನೆ. ಆತ ವೀಡಿಯೋ ಮಾಡಿ ಇಬ್ಬರ ಕ್ಷಮೆ ಕೇಳಿರುವ ವಿಡಿಯೋ ವೈರಲ್ ಆಗುತ್ತಿದೆ. ಈ ವೀಡಿಯೋ ಹಂಚಿಕೊಂಡು ಪ್ರಥಮ್ ಪೋಸ್ಟ್ ಮಾಡಿದ್ದಾರೆ.

ನಟ ಪ್ರಥಮ್ಗೆ ಜೀವ ಬೆದರಿಕೆ; ದೂರು ದಾಖಲು
ಮಾತಾಡುವಾಗ ನಾಲಿಗೆ ಮೇಲೆ ಹಿಡಿತವಿರಲಿ. ನಮ್ಮ ಫೋನ್ ಪೊಲೀಸ್ ವಶಪಡಿಸಿಕೊಂಡು ಎಲ್ಲಾ ಕಾಮೆಂಟ್ಸ್, ಮೆಸೇಜ್‌ನ ಗಮನಿಸುತ್ತಿದ್ದಾರೆ. ಯಾರಿಗೋಸ್ಕರವೋ ದಯವಿಟ್ಟು ನಿಮ್ಮಲೈಫ್‌ನ ಹಾಳುಮಾಡಿಕೊಳ್ಳಬೇಡಿ; ಕನ್ನಡಕ್ಕಾಗಿ, ಕಾವೇರಿಗಾಗಿ ಬೇಕಿದ್ರೆ ಜೈಲಿಗೆ ಹೋಗಿ. ಪುಂಡಾಟ ಆಡ್ಕೊಂಡು ನಿಮ್ ಕುಟುಂಬ ಬೀದಿಗೆ ತರಬೇಡಿ. ನನ್ನ ಬಗ್ಗೆ ಮಾತಾಡುವಾಗ ಎಚ್ಚರಿಕೆ" ಎಂದು ಪ್ರಥಮ್ ಬರೆದುಕೊಂಡಿದ್ದಾರೆ.
"ನನ್ನ ಹೆಸರು ಚೇತನ್. ನಾನು ದರ್ಶನ್ ಅಭಿಮಾನಿ. ಅವತ್ತು ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಬಳಿ ಹೋಗಿದ್ದೆ. ಉಮಾಪತಿ ಹಾಗೂ ಪ್ರಥಮ್ ಅವರ ಬಗ್ಗೆ ಮಾತನಾಡಿದ್ದೆ. ಕಾನೂನು ಪ್ರಕಾರ ಏನಿದೆ, ನಾನು ಅವರಿಗೆ ತಲೆ ಬಾಗುತ್ತೇನೆ. ನನ್ನಿಂದ ಏನೇ ತಪ್ಪಾಗಿದ್ದರೂ ಕ್ಷಮಿಸಿಬಿಡಿ" ಎಂದು ಕೇಳಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


