ರಾಜ್ಯ

ಹಾಲಿನ ದರ ಏರಿಕೆ ಮಾಡುವುದು KMF, ಹೈನುಗಾರರ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ಕೈಗೊಂಡಿದೆ​: ಸಿಎಂ ಸಿದ್ದರಾಮಯ್ಯ

ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್​. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆ ಇದೆ. ಹಾಲಿನ‌ ದರ ಹೆಚ್ಚಳ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.

ಹಾಲಿನ ದರ ಏರಿಕೆ ಮಾಡುವುದು KMF, ಹೈನುಗಾರರ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ಕೈಗೊಂಡಿದೆ​: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯನವರಿಂದ ಸುದ್ದಿಗೋಷ್ಠಿ
Published On :

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ಕೆಎಂಎಫ್ (KMF) ಹಾಲಿನ ದರವನ್ನು ಪ್ರತಿ ಲೀಟರ್ ಗೆ 2 ರೂಪಾಯಿ ಏರಿಕೆ ಮಾಡಿದ್ದು, ನಾಳೆಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಬೆಲೆ ಏರಿಕೆ ಬೆನ್ನಲ್ಲೇ ತೀವ್ರ ಟೀಕೆ ವ್ಯಕ್ತವಾಗುತ್ತಿದ್ದು ಇದಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್​. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆ ಇದೆ. ಹಾಲಿನ‌ ದರ ಹೆಚ್ಚಳ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದ್ದು, ಬೇರೆ ರಾಜ್ಯಗಳ ಪರಿಸ್ಥಿತಿ ನೋಡಿಕೊಂಡು ದರ ಹೆಚ್ಚಳ ಮಾಡ್ತಾರೆ. ಅಲ್ಲಿಗಿಂತ ಹಾಲಿನ ದರ ಕಡಿಮೆ ಇದ್ದರೆ ಜಾಸ್ತಿ‌ ಮಾಡ್ತಾರೆ. ನನಗೆ ಗೊ‌ತ್ತಿರುವ ಪ್ರಕಾರ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇಲ್ಲಿ ಕಡಿಮೆ ಇದೆ ಎಂದರು.

ಸದ್ಯ ಕೆಎಂಎಫ್‌ನ 1 ಲೀಟರ್‌ ಹಾಲಿಗೆ ಪ್ರಸ್ತುತ ದರ 42 ರೂಪಾಯಿ. ಇನ್ನು ಮುಂದೆ 1 ಲೀಟಲ್‌ ಹಾಲಿನ ಪ್ಯಾಕೆಟ್ ತೂಕ ಹೆಚ್ಚುವರಿಯಾಗಿ 50 ಎಂಎಲ್‌ ಸೇರ್ಪಡೆ ಮಾಡಲಾಗುತ್ತದೆ. 50 ಎಂಎಲ್‌ ಹಾಲಿನ 2 ರೂಪಾಯಿ 10 ಪೈಸೆ. ಅದಕ್ಕಾಗಿ 1050 ಎಂಎಲ್‌ನ ಈ ಪ್ಯಾಕೆಟ್ ಹಾಲಿನ ದರ ನಾಳೆಯಿಂದ 44 ರೂಪಾಯಿ ಆಗಿರಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.