ರಾಜ್ಯ

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ರೇಣುಕಾಸ್ವಾಮಿ ಪೋಷಕರು: ಸೊಸೆಗೆ ಸರ್ಕಾರಿ ಉದ್ಯೋಗಕ್ಕೆ ಮನವಿ

ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ತಂದೆ, ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ತಮ್ಮ ಸೊಸೆಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು.

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ರೇಣುಕಾಸ್ವಾಮಿ ಪೋಷಕರು: ಸೊಸೆಗೆ ಸರ್ಕಾರಿ ಉದ್ಯೋಗಕ್ಕೆ ಮನವಿ
ಸಿದ್ದರಾಮಯ್ಯ ಭೇಟಿ ಮಾಡಿದ ರೇಣುಕಾಸ್ವಾಮಿ ಪೋಷಕರು
Published On :

ಬೆಂಗಳೂರು: ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ತಂದೆ, ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ತಮ್ಮ ಸೊಸೆಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು. ಮುಖ್ಯಮಂತ್ರಿಗಳು ಇವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ತಿಳಿದು ಬಂದಿದೆ.

ರೇಣುಕಾಸ್ವಾಮಿ ಅವರ ತಂದೆ, ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ, ಕುಟುಂಬಕ್ಕೆ ಏಕೈಕ ಆಧಾರವಾಗಿದ್ದ ಪುತ್ರನ ಅಗಲಿಕೆಯಿಂದ ಎದುರಾಗಿರುವ ಸಂಕಷ್ಟವನ್ನು ವಿವರಿಸಿದರು. ರೇಣುಕಾಸ್ವಾಮಿಯ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು. ನಮ್ಮ ಸರ್ಕಾರವು ರೇಣುಕಾಸ್ವಾಮಿಯ ಸಾವಿಗೆ ನ್ಯಾಯ ದೊರಕಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಜೊತೆಗೆ ಸರ್ಕಾರದಿಂದ ಸಾಧ್ಯವಿರುವ ಅಗತ್ಯ ನೆರವು ನೀಡುವುದಾಗಿ ಮುಖ್ಯಮಂತ್ರಿ ಅವರು ಭರವಸೆ ನೀಡಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್​ ಮಾಡಿರುವ ಸಿಎಂ, ಚಿತ್ರದುರ್ಗದ ರೇಣುಕಾಸ್ವಾಮಿ ಅವರ ತಂದೆ, ತಾಯಿ ಇಂದು ನನ್ನನ್ನು ಭೇಟಿಯಾಗಿ ಕುಟುಂಬಕ್ಕೆ ಏಕೈಕ ಆಧಾರವಾಗಿದ್ದ ಪುತ್ರನ ಅಗಲಿಕೆಯಿಂದ ಎದುರಾಗಿರುವ ಸಂಕಷ್ಟವನ್ನು ವಿವರಿಸಿ, ರೇಣುಕಾಸ್ವಾಮಿಯ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು. ನಮ್ಮ ಸರ್ಕಾರವು ರೇಣುಕಾಸ್ವಾಮಿಯ ಸಾವಿಗೆ ನ್ಯಾಯ ದೊರಕಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಜೊತೆಗೆ ಸರ್ಕಾರದಿಂದ ಸಾಧ್ಯವಿರುವ ಅಗತ್ಯ ನೆರವು ನೀಡುವುದಾಗಿ ತಿಳಿಸಿದ್ದೇನೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.