ದಕ್ಷಿಣ ಕನ್ನಡ: ಉಳ್ಳಾಲದಲ್ಲಿ ಮನೆ ಗೋಡೆ ಕುಸಿತ; ಒಂದೇ ಕುಟುಂಬದ ನಾಲ್ವರ ದುರ್ಮರಣ
ಅಬೂಬಕ್ಕರ್ ಎಂಬವರಿಗೆ ಸೇರಿದ ಮನೆಯ ಗೋಡೆಯು ಯಾಸಿರ್ ಅವರ ಮನೆಯ ಮೇಲೆ ಬಿದ್ದಿದೆ. ಇದರ ಪರಿಣಾಮ ಮನೆ ಕುಸಿತವಾಗಿದೆ.

ದಕ್ಷಿಣ ಕನ್ನಡ: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ಮನೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
ಯಾಸಿರ್ (45), ಪತ್ನಿ ಮರಿಯಮ್ಮ (40) ಮತ್ತು ಮಕ್ಕಳಾದ ರಿಯಾನ ಮತ್ತು ರಿಫಾನ ಮೃತರು ಎಂದು ಗುರುತಿಸಲಾಗಿದೆ.
ಅಬೂಬಕ್ಕರ್ ಎಂಬವರಿಗೆ ಸೇರಿದ ಮನೆಯ ಗೋಡೆಯು ಯಾಸಿರ್ ಅವರ ಮನೆಯ ಮೇಲೆ ಬಿದ್ದಿದೆ. ಇದರ ಪರಿಣಾಮ ಮನೆ ಕುಸಿತವಾಗಿದೆ.
ಅಗ್ನಿಶಾಮಕ ದಳದ ಪ್ರಕಾರ, ಕೆಳಗಿರುವ ಮಣ್ಣು ಸಡಿಲಗೊಂಡಿತು ಮತ್ತು ಪಕ್ಕದ ಮನೆಯ ಮೇಲೆ ಗೋಡೆ ಕುಸಿದಿದೆ.
ಸ್ಥಳೀಯರ ಪ್ರಕಾರ, ಪಕ್ಕದ ಮನೆಯವರ ಗೋಡೆಯು ಸಂತ್ರಸ್ತ ಯಾಸಿರ್ ಅವರ ಮನೆಗೆ ಬಹಳ ಹತ್ತಿರದಲ್ಲಿತ್ತು ಮತ್ತು ಅದೇ ವಿಷಯವಾಗಿ ಅವರ ನಡುವೆ ಆಗಾಗ್ಗೆ ಜಗಳಗಳು ನಡೆಯುತ್ತಿದ್ದವು.
ಘಟನೆಯ ನಂತರ ರಕ್ಷಣಾ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಅವಶೇಷಗಳಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



