Kukke Subramanya: ಕುಡಿತದ ಮತ್ತಿನಲ್ಲಿದ್ದ ವ್ಯಕ್ತಿಯ ಎತ್ತೆಸೆದ ದೇಗುಲದ ಆನೆ
ಕಂಠಪೂರ್ತಿ ಕುಡಿದು ಓಲಾಡುತ್ತಾ ಬಂದ ವ್ಯಕ್ತಿಯನ್ನು ಶ್ರೀಕ್ಷೇತ್ರ ಕುಕ್ಕೆ ಸುಬ್ರಮಣ್ಯ ದೇಗುಲದ ಆನೆ ಯಶಸ್ವಿನಿ (Elephant Yashaswini) ಎತ್ತಿ ಬಿಸಾಡಿದ ಘಟನೆ ನಡೆದಿದೆ.

ಮಂಗಳೂರು: ಕಂಠಪೂರ್ತಿ ಕುಡಿದು ಓಲಾಡುತ್ತಾ ಬಂದ ವ್ಯಕ್ತಿಯನ್ನು ಶ್ರೀಕ್ಷೇತ್ರ ಕುಕ್ಕೆ ಸುಬ್ರಮಣ್ಯ ದೇಗುಲದ ಆನೆ ಯಶಸ್ವಿನಿ (Elephant Yashaswini) ಎತ್ತಿ ಬಿಸಾಡಿದ ಘಟನೆ ನಡೆದಿದೆ.
ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ (Kukke Subramanya Temple) ಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿದ್ದ ವ್ಯಕ್ತಿ ಆನೆ ಸಮೀಪಕ್ಕೆ ಬರುತ್ತಿದ್ದ ವೇಳೆ ಮದ್ಯದ ವಾಸನೆ ಹಿಡಿಸಿದ ಆನೆ ಯಶಸ್ವಿನಿ ಆತನನ್ನು ಹಿಡಿದು ಬಿಸಾಡಿದೆ.
ಪೋಲೀಸರು ಆನೆಯೊಂದಿಗೆ ಫೋಟೋ ತೆಗೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಆನೆ ಎಸೆದ ರಭಸಕ್ಕೆ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಗೆ ಆಘಾತವಾಗಿದೆ.
ಆನೆ ಎಸೆದ ರಭಸಕ್ಕೆ ವ್ಯಕ್ತಿ ನೆಲಕ್ಕೆ ಅಪ್ಪಳಿಸಿದ್ದು ಅದೃಷ್ಟವಶಾತ್ ಯಾವುದೇ ಗಾಯಗಳಾಗದೇ ಪಾರಾಗಿದ್ದಾರೆ. ವ್ಯಕ್ತಿ ಕುಡಿತದ ಮತ್ತಿನಲ್ಲೇ ತೂರಾಡಿಕೊಂಡು ಬಂದಿರೋದ್ರಿಂದಲೇ ಆನೆ ಕೋಪಗೊಂಡು ಎತ್ತಿ ಬಿಸಾಡಿದೆ ಎನ್ನಲಾಗುತ್ತಿದೆ. ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



