ರಾಜ್ಯ

ಹುಬ್ಬಳ್ಳಿ ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಇ-ಮೇಲ್: ದೂರು ದಾಖಲು

ವಿಮಾನ ನಿಲ್ದಾಣ ನಿರ್ದೇಶಕ ರೂಪೇಶ್​​​​ ಕುಮಾರ್​​​​ಗೆ ಅನಾಮಧೇಯ ವ್ಯಕ್ತಿಯೊಬ್ಬನಿಂದ ಇ-ಮೇಲ್​ ಮೂಲಕ ಜೀವಬೆದರಿಕೆ ಸಂದೇಶ ಬಂದಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಇ-ಮೇಲ್: ದೂರು ದಾಖಲು
ಹುಬ್ಬಳ್ಳಿ ವಿಮಾನ ನಿಲ್ದಾಣ
Published On :

ಹುಬ್ಬಳ್ಳಿ: ವಿಮಾನ ನಿಲ್ದಾಣ, ಶಾಲೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ಬಾಂಬ್ ಬೆದರಿಕೆ ಕರೆಗಳು, ಇ ಮೇಲ್ ಸಂದೇಶಗಳು ಬರುವುದು ಹೆಚ್ಚಾಗುತ್ತಿದೆ. ಎರಡು ದಿನದ ಹಿಂದೆಯಷ್ಟೇ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಬಂದಿದೆ.

ವಿಮಾನ ನಿಲ್ದಾಣ ನಿರ್ದೇಶಕ ರೂಪೇಶ್​​​​ ಕುಮಾರ್​​​​ಗೆ ಅನಾಮಧೇಯ ವ್ಯಕ್ತಿಯೊಬ್ಬನಿಂದ ಇ-ಮೇಲ್​ ಮೂಲಕ ಜೀವಬೆದರಿಕೆ ಸಂದೇಶ ಬಂದಿದೆ.

ಲಾಂಗ್​ ಲೀವ್​​​​ ಪ್ಯಾಲೆಸ್ತೇನ್​​​​ ಎಂಬ ಹೆಸರಿನ ಮೇಲ್​ ಐಡಿಯಿಂದ ನಿರ್ದೇಶಕರ ಕಚೇರಿಯ ಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ನಾವು ನಿಮ್ಮನ್ನು ನಾಶ ಮಾಡುತ್ತೇವೆ. ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರ. ಬೆಂಕಿಯಲ್ಲಿ ಎಸೆಯುತ್ತೇವೆ, ಉಸಿರುಗಟ್ಟಿ ಸಾಯುತ್ತೀರ ಎಂದು ಜೀವ ಬೆದರಿಕೆ ಹಾಕಿದ್ದಾರೆ.

ಇ-ಮೇಲ್ ಸಂದೇಶ ಬಂದ ತಕ್ಷಣವೇ ರೂಪೇಶ್ ಅವರು ಈ ವಿಚಾರವನ್ನು ಟರ್ಮಿನಲ್ ಉಸ್ತುವಾರಿ ಪ್ರತಾಪ್ ಅವರ ಗಮನಕ್ಕೆ ತಂದಿದ್ದಾರೆ. ನಂತರ ಸಿಎಎಸ್‌ಒ, ಐಬಿ, ಬಿಡಿಡಿಎಸ್ ಮತ್ತು ಬಾಂಬ್ ನಿಷ್ಕ್ರಿಯ ದಳಕ್ಕೆ ಮಾಹಿತಿ ರವಾನಿಸಿದ್ದು ವಾಯುಯಾನ ಭದ್ರತಾ ನಿಯಮದ ಪ್ರಕಾರ ಅಗತ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ. ಈ ಕುರಿತು ಗೋಕುಲ ರೋಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಕ್ಷಣ ಭದ್ರತಾ ಕ್ರಮಗಳನ್ನು ಕೈಗೊಂಡ ನಂತರ ವಿಮಾನ ನಿಲ್ದಾಣದ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.