ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: SITಯಿಂದ ಮತ್ತೋರ್ವ ಆರೋಪಿ ಬಂಧನ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.
ಆತ್ಮಹತ್ಯೆಗೆ ಶರಣಾದ ನಿಗಮದ ಅಧಿಕಾರಿ ಚಂದ್ರಶೇಖರನ್ ಬರೆದಿದ್ದ ಮರಣಪತ್ರದಲ್ಲಿ ಸಾಯಿತೇಜ ಹೆಸರು ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಸಾಯಿತೇಜ ಅವರನ್ನು ಹೈದರಾಬಾದ್ ನಲ್ಲಿ ಬಂಧನಕ್ಕೊಳಪಡಿಸಿದ್ದು, ಬೆಂಗಳೂರಿಗೆ ಕರೆತಂದಿದ್ದಾರೆಂದು ತಿಳಿದುಬಂದಿದೆ.
ಇದರೊಂದಿಗೆ ಪ್ರಕರಣ ಸಂಬಂಧ ಬಂಧಿತರ ಒಟ್ಟು ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ಅಧ್ಯಕ್ಷ ಸತ್ಯನಾರಾಯಣ ಅವರ ಸಹವರ್ತಿಯಾಗಿ ಸಾಯಿತೇಜ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಸಾಯಿತೇಜಾ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಪಾಲಿಕೆಯಿಂದ ಸಹಕಾರ ಸಂಘಕ್ಕೆ ಹಣ ವರ್ಗಾವಣೆ ಮಾಡುವಲ್ಲಿ ಸಾಯಿತೇಜಾ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸತ್ಯನಾರಾಯಣ ಅವರನ್ನು ಜೂನ್ 4 ರಂದು ಬಂಧಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



