ರಾಜ್ಯದ ಹಲವೆಡೆ ಭಾರೀ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ..!
ದಕ್ಷಿಣ ಕನ್ನಡದಲ್ಲಿಂದು ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯಾದ್ಯಂತ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಲಾಗಿದೆ.

ಬೆಂಗಳೂರು: ದಕ್ಷಿಣ ಕನ್ನಡದಲ್ಲಿಂದು ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯಾದ್ಯಂತ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಲಾಗಿದೆ.
ಅಂಗನವಾಡಿಯಿಂದ ಪ್ರೌಢ ಶಾಲೆವರೆಗೂ ರಜೆ ನೀಡಿ ಜಿಲ್ಲಾಧಿಕಾರಿ ಮುಗಿಲನ್ ಅವರು ಆದೇಶ ಹೊರಡಿಸಿದ್ದಾರೆ. ಅಲ್ಲದೇ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ನಿನ್ನೆ ರಾತ್ರಿ ಇಡೀ ಮಳೆ ಸುರಿದಿದೆ. ಇದರಿಂದ ಜಿಲ್ಲೆಯಾದ್ಯಂತ ಭಾರೀ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಇಂದು ಮತ್ತು ನಾಳೆ ಕೂಡ ಜಿಲ್ಲೆಯಲ್ಲಿ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು, ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು ಮತ್ತು ಹಾವೇರಿ ಜಿಲ್ಲೆಯಲ್ಲಿ ಗಂಟೆಗೆ 50 kmph ವೇಗದ ಗಾಳಿ, ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಸಿಡಿಲು- ಗುಡುಗು ವೇಳೆ ಎಲೆಕ್ಟ್ರಿಕ್ ಉಪಕರಣಗಳನ್ನು ಆಫ್ ಮಾಡುವಂತೆ ಹಾಗೂ ಮಳೆ ಬರುವಾಗ ಶಿಥಿಲ ಕಟ್ಟಡ, ಮರದ ಕೆಳಗಡೆ ನಿಲ್ಲದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



