ರಾಜ್ಯದಲ್ಲಿ ಮುಂಗಾರು ಚುರುಕು: ಹಲವಡೆ ವರುಣನ ಅಬ್ಬರ; KRS ಡ್ಯಾಂ ಒಳಹರಿವಿನಲ್ಲಿ ಹೆಚ್ಚಳ
ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಒಳ ಹರಿವಿನಲ್ಲಿ ಹೆಚ್ಚಳವಾಗಿದೆ.

ಮಂಡ್ಯ: ಕಳೆದ ಎರಡು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಚುರುಕು ಪಡೆದುಕೊಂಡಿದ್ದು, ಕೆಆರ್‌ಎಸ್ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳವಾಗಿದೆ. ರಾಜ್ಯದ ಹಲವೆಡೆ ಮಳೆಯ ಆರ್ಭಟ ಜೋರಾಗಿದೆ.
ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಒಳ ಹರಿವಿನಲ್ಲಿ ಹೆಚ್ಚಳವಾಗಿದೆ. ಒಂದೇ ದಿನದಲ್ಲಿ 1,615 ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದ್ದು, ನಿನ್ನೆ ಕೆಆರ್‌ಎಸ್ ಡ್ಯಾಂಗೆ 2,241 ಕ್ಯೂಸೆಕ್ ಒಳಹರಿವು ಬಂದಿತ್ತು. ಇಂದು ಕೆಆರ್‌ಎಸ್‌ಗೆ 3,856 ಕ್ಯೂಸೆಕ್ ನೀರು ಒಳಹರಿವು ಬಂದಿದೆ. ಒಳಹರಿವು ಹೆಚ್ಚಳ ಹಿನ್ನೆಲೆ ನೀರಿನ ಮಟ್ಟದಲ್ಲೂ ಹೆಚ್ಚಳವಾಗಿದೆ.
124.80 ಅಡಿ ಗರಿಷ್ಠ ಮಟ್ಟದ ಕೆಆರ್‌ಎಸ್ ಡ್ಯಾಂ 88.40 ಅಡಿ ಭರ್ತಿಯಾಗಿದೆ. 49.452 ಟಿಎಂಸಿ ಗರಿಷ್ಠ ಸಾಂದ್ರತೆ ಡ್ಯಾಂನಲ್ಲಿ 15.007 ಟಿಎಂಸಿ ನೀರು ಸಂಗ್ರಹವಾಗಿದ್ದು, ಡ್ಯಾಂನ ಹೊರ ಹರಿವು 472 ಕ್ಯೂಸೆಕ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



