ರಾಜ್ಯ

ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್‌ ಹಂಚಿಕೆ ಪ್ರಕರಣ: ಪ್ರೀತಂ ಗೌಡಗೆ ಬಂಧನದಿಂದ ರಕ್ಷಣೆ ನೀಡಿದ ಹೈಕೋರ್ಟ್

ವಿಡಿಯೋ ಹಂಚಿಕೆ ಆರೋಪದ ಮೇಲೆ ಮಾಜಿ ಶಾಸಕ ಪ್ರೀತಂ ಗೌಡ, ಸೇರಿದಂತೆ ಇತರ ಮೂವರ ವಿರುದ್ಧ ಎಸ್ಐಟಿ ಪ್ರಕರಣ ದಾಖಲಿಸಿತ್ತು.

ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್‌ ಹಂಚಿಕೆ ಪ್ರಕರಣ: ಪ್ರೀತಂ ಗೌಡಗೆ ಬಂಧನದಿಂದ ರಕ್ಷಣೆ ನೀಡಿದ ಹೈಕೋರ್ಟ್
ಪ್ರೀತಂ ಗೌಡ - ಪ್ರಜ್ವಲ್ ರೇವಣ್ಣ
Published On :

ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳನ್ನು ಒಳಗೊಂಡ ಪೆನ್‌ ಡ್ರೈವ್‌ ಹಂಚಿಕೆ ಪ್ರಕರಣದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಅವರಿಗೆ ಹೈಕೋರ್ಟ್ ಶುಕ್ರವಾರ ಬಂಧನದಿಂದ ರಕ್ಷಣೆ ನೀಡಿದೆ.

ವಿಡಿಯೋ ಹಂಚಿಕೆ ಆರೋಪದ ಮೇಲೆ ಮಾಜಿ ಶಾಸಕ ಪ್ರೀತಂ ಗೌಡ, ಸೇರಿದಂತೆ ಇತರ ಮೂವರ ವಿರುದ್ಧ ಎಸ್ಐಟಿ ಪ್ರಕರಣ ದಾಖಲಿಸಿತ್ತು. ಪ್ರೀತಂ ಗೌಡ ವಿರುದ್ಧ ಪೆನ್‌ಡ್ರೈವ್ ಹಂಚಿಕೆ ಆರೋಪ ಕೇಳಿ ಬಂದಿತ್ತು. ಇದಕ್ಕೆ ಪೂರಕ ಎಂಬಂತೆ ಅವರ ಇಬ್ಬರ ಆಪ್ತರನ್ನು ಎಸ್‌ಐಟಿ ಬಂಧಿಸಿದೆ. ಬಂಧನ ಭೀತಿಯಲ್ಲಿ ಪ್ರೀತಂ ಗೌಡ ಅವರು ಬಂಧನದಿಂದ ರಕ್ಷಣೆ ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರೀತಂ ಗೌಡ ವಿರುದ್ಧದ ತನಿಖೆಗೆ ತಡೆ ನೀಡಲು ನಿರಾಕರಿಸಿದೆ. ಆರೋಪಿಯ ವಿರುದ್ಧ ಎಸ್ಐಟಿ ತನಿಖೆ ಮುಂದುವರಿಸಬಹುದು. ವಿಚಾರಣೆಗೆ ಸಹಕರಿಸುವಂತೆ ಅರ್ಜಿದಾರ ಪ್ರೀತಂ ಗೌಡಗೆ ಹೈಕೋರ್ಟ್ ಸೂಚನೆ ನೀಡಿದೆ.

ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ರಿಲೀಸ್ ಮಾಡಿದ್ದು ಯಾರು ಎನ್ನುವುದರ ಬಗ್ಗೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ಕೆಲ ಶಂಕಿತರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಆದರೆ ಸಂತ್ರಸ್ತ ಮಹಿಳೆಯೊಬ್ಬರು ಖುದ್ದು ಪ್ರಜ್ವಲ್‌ ರೇವಣ್ಣ, ಪ್ರೀತಂಗೌಡ ಸೇರಿದಂತೆ ನಾಲ್ವರ ವಿರುದ್ಧ ದೂರು ನೀಡಿದ್ದಾರೆ.

ಮಹಿಳೆ ನೀಡಿದ ದೂರು ಆಧರಿಸಿ ಎಫ್​ಐಆರ್​ ದಾಖಲಿಸಿದ್ದ ಬೆಂಗಳೂರಿನ ಸೈಬರ್‌ ಕ್ರೈಂ ಪೊಲೀಸರು, ಪ್ರೀತಂಗೌಡ ವಿರುದ್ಧ ಕಠಿಣ ಸೆಕ್ಷನ್‌ಗಳನ್ನೇ ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.