ಜುಲೈ ಮೊದಲ ವಾರದಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ವಿಧಾನಸಭಾ ಉಪಚುನಾವಣೆ, MLC ಸ್ಥಾನಕ್ಕೆ ಅಭ್ಯರ್ಥಿಗಳ ಆಯ್ಕೆ ಸಾಧ್ಯತೆ
ಮೂವರು ಶಾಸಕರು ಸಂಸದರಾಗಿ ಆಯ್ಕೆಯಾದ ನಂತರ ತೆರವಾಗಿರುವ ಶಿಗ್ಗಾಂವಿ, ಚನ್ನಪಟ್ಟಣ ಮತ್ತು ಸಂಡೂರು ಮೂರು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಶೀಘ್ರದಲ್ಲೇ ನಡೆಯಲಿದೆ.

ಬೆಂಗಳೂರು: ಮೂವರು ಶಾಸಕರು ಸಂಸದರಾಗಿ ಆಯ್ಕೆಯಾದ ನಂತರ ತೆರವಾಗಿರುವ ಶಿಗ್ಗಾಂವಿ, ಚನ್ನಪಟ್ಟಣ ಮತ್ತು ಸಂಡೂರು ಮೂರು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಶೀಘ್ರದಲ್ಲೇ ನಡೆಯಲಿದೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಮೂರು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದರು.
ಇದೇ ವೇಳೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ತಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸುವುದಿಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೇಳಿಕೆ ಕುರಿತು ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಮುಖ್ಯವಲ್ಲ. ನಮಗೆ ಗೊತ್ತಿರುವುದಿಷ್ಟೇ, ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಿನಿಂದ ಹೋರಾಡಿ ಗೆಲುವು ಸಾಧಿಸುವುದು ಎಂದು ಹೇಳಿದರು.
ಜುಲೈ 4 ಅಥವಾ 5 ರಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಅದೇ ದಿನ ಕೋರ್ ಕಮಿಟಿ ಸಭೆಯಲ್ಲಿ ಎಚ್‌ಡಿ ಕುಮಾರಸ್ವಾಮಿ (ಚನ್ನಪಟ್ಟಣ), ಬಸವರಾಜ ಬೊಮ್ಮಾಯಿ (ಶಿಗ್ಗಾಂವಿ) ಮತ್ತು ತುಕಾರಾಂ (ಸಂಡೂರು) ಪ್ರತಿನಿಧಿಸುವ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಕೋಟ ಶ್ರೀನಿವಾಸ ಪೂಜಾರಿ ಪ್ರತಿನಿಧಿಸಿದ್ದ ದಕ್ಷಿಣ ಕನ್ನಡ (ಸ್ಥಳೀಯ ಸಂಸ್ಥೆ) ಎಂಎಲ್‌ಸಿ ಸ್ಥಾನ ಕುರಿತು ಕುರಿತು ಚರ್ಚೆ ನಡೆಯಲಿದೆ.
ಪಕ್ಷವು ಮೂರ್ನಾಲ್ಕು ಹಿರಿಯ ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸುತ್ತಿದೆ, ಅವರು ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಆಯ್ಕೆ ಮಾಡಲು ಈ ನಾಲ್ಕು ಕ್ಷೇತ್ರಗಳ ಸಮೀಕ್ಷೆಯನ್ನು ನಡೆಸುತ್ತಾರೆ. ಬಳಿಕ ಪಕ್ಷದ ಹೈಕಮಾಂಡ್‌ಗೆ ಕಳುಹಿಸಿ ಅಂತಿಮಗೊಳಿಸಲಿದ್ದೇವೆ ಎಂದು ತಿಳಿಸಿದರು.
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಕುರಿತು ಕುಮಾರಸ್ವಾಮಿ ಅವರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.
ಸಿದ್ದರಾಮಯ್ಯ ಎಷ್ಟು ದಿನ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ. ಡಿ.ಕೆ.ಶಿವಕುಮಾರ್ ಅವರನ್ನು ಮುಗಿಸಬೇಕು ಎಂದುಕೊಂಡಿದ್ದರು, ಹೀಗಾಗಿ ಹೆಚ್ಚಿನ ಡಿಸಿಎಂ ಹುದ್ದೆಗಳ ವಿಚಾರವನ್ನು ತೆಗೆದುಕೊಂಡಿದ್ದಾರೆ, ಇದೀಗ ಸಿಎಂ ಬದಲಾವಣೆಗೆ ಒತ್ತಾಯ ಕೇಳಿಬರುತ್ತಿದೆ.
ಇದೇ ವೇಳೆ ಲೋಕಸಭೆ ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರು ಕ್ಯಾಮೆರಾಗಳಿಗೆ ಪೋಸ್ ಕೊಟ್ಟು ಕೈ ಕೈ ಹಿಡಿದುಕೊಂಡು ಓಡಾಡಿದ್ದನ್ನು ವಿಜಯೇಂದ್ರ ಅವರು ಲೇವಡಿ ಮಾಡಿದರು. ಈಗ ಎಲ್ಲವೂ ಹಳ್ಳ ಹಿಡಿಯುತ್ತಿದ್ದು, ಜನರು ಸರ್ಕಾರದ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ ಎಂದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



