ರಾಜ್ಯ

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಜುಲೈ 8ರವರೆಗೆ ನ್ಯಾಯಾಂಗ ಬಂಧನ

ಆರೋಪಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ಪ್ರಜ್ವಲ್ ರೇವಣ್ಣ ಅವರನ್ನು ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಜುಲೈ 8ರವರೆಗೆ ನ್ಯಾಯಾಂಗ ಬಂಧನ
ಪ್ರಜ್ವಲ್ ರೇವಣ್ಣ
Published On :

ಬೆಂಗಳೂರು: ಹಲವು ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಲಯ ಶನಿವಾರ ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ನಾಲ್ಕು ದಿನಗಳ ವಿಶೇಷ ತನಿಖಾ ತಂಡದ(ಎಸ್‌ಐಟಿ) ಕಸ್ಟಡಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಪ್ರಜ್ವಲ್ ರೇವಣ್ಣ ಅವರನ್ನು 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು.

ಆರೋಪಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ಪ್ರಜ್ವಲ್ ರೇವಣ್ಣ ಅವರನ್ನು ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ 33 ವರ್ಷದ ಮೊಮ್ಮಗನ ವಿರುದ್ಧ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಎಸ್‌ಐಟಿ ತನಿಖೆ ನಡೆಸುತ್ತಿದೆ.

ಏಪ್ರಿಲ್‌ 28 ರಂದು ಪ್ರಜ್ವಲ್‌ ರೇವಣ್ಣ ವಿರುದ್ದ ಹೊಳೆನರಸೀಪುರದಲ್ಲಿ ಮೊದಲು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಇದಾದ ಬಳಿಕ ಅತ್ಯಾಚಾರ ಎಸಗಿದ ಪ್ರಕರಣವೂ ದಾಖಲಾಗಿದ್ದವು. ಒಂದು ತಿಂಗಳಿಗೂ ಅಧಿಕ ಕಾಲ ವಿದೇಶದಲ್ಲಿಯೇ ಇದ್ದ ಪ್ರಜ್ವಲ್‌ ರೇವಣ್ಣ ಆನಂತರ ವಿಶೇಷ ತನಿಖಾ ತಂಡದ ಎದುರು ಶರಣಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.