ರಾಜ್ಯ

ಇಂದು ಅಥವಾ ನಾಳೆ 'ಗೃಹಲಕ್ಷ್ಮಿ' ಹಣ ಖಾತೆಗೆ ಜಮೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಗೃಹಲಕ್ಷ್ಮಿ ಹಣವನ್ನು ಮೇ 1ರಂದು ಕೊಟ್ಟಿದ್ದೆವು. ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಿದ್ದೇವೆ ಇಡೀ ರಾಜ್ಯದಲ್ಲಿ ಇವತ್ತು ಮತ್ತು ನಾಳೆ ಕ್ರೆಡಿಟ್ ಆಗಲಿದೆ ಎಂದು ಹೇಳಿದರು.

ಇಂದು ಅಥವಾ ನಾಳೆ 'ಗೃಹಲಕ್ಷ್ಮಿ' ಹಣ ಖಾತೆಗೆ ಜಮೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ
ಲಕ್ಷ್ಮೀ ಹೆಬ್ಬಾಳ್ಕರ್
Published On :

ಬೆಂಗಳೂರು: ಇಂದು ಅಥವಾ ನಾಳೆ ‘ಗೃಹಲಕ್ಷ್ಮಿ’ ಹಣ ಖಾತೆಗೆ ಕ್ರೆಡಿಟ್ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದೇ ಸಂದರ್ಭದಲ್ಲಿ ಐದು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ, ವಿನಾ ಕಾರಣ ಆರೋಪ ಮಾಡುತ್ತಿದ್ದಾರೆ. ಅಧಿಕಾರ ಕೊಟ್ಟಾಗ 40 ಪರ್ಸಂಟ್ ಕಮಿಷನ್ ತೆಗೆದುಕೊಂಡು ಮನೆಯಲ್ಲಿ ಕುಳಿತರು ಎಂದು ಟೀಕಿಸಿದ್ದಾರೆ.

ಗೃಹಲಕ್ಷ್ಮಿ ಹಣವನ್ನು ಮೇ 1ರಂದು ಕೊಟ್ಟಿದ್ದೆವು. ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಿದ್ದೇವೆ ಇಡೀ ರಾಜ್ಯದಲ್ಲಿ ಇವತ್ತು ಮತ್ತು ನಾಳೆ ಕ್ರೆಡಿಟ್ ಆಗಲಿದೆ ಎಂದು ಹೇಳಿದರು.

ಮೇ ತಿಂಗಳಲ್ಲಿ ಎಲ್ಲರ ಅಕೌಂಟ್‌ಗೆ ಗೃಹಲಕ್ಷ್ಮಿ ಹಣ ಹೋಗಿದೆ. ಕಾಂಗ್ರೆಸ್ ಪಕ್ಷದ ಸರ್ಕಾರ ಐದು ವರ್ಷ ಕಾರ್ಯಭಾರ ಮಾಡುತ್ತದೆ. ಐದು ವರ್ಷ ಕೂಡ ಗೃಹಲಕ್ಷ್ಮಿ ಮನೆ ಮನೆ ಬಾಗಿಲಿಗೆ ಹೋಗುತ್ತಾಳೆ. ಗೃಹಲಕ್ಷ್ಮಿ ಮುಂದುವರೆಯುತ್ತದೆ.

ಯಾರು ಕೂಡ ಆತಂಕಕ್ಕೊಳಗಾಗುವುದು ಬೇಡ. ಕೊಟ್ಟ ಭಾಷೆಯಂತೆ ಪ್ರತಿ ತಿಂಗಳು ತಪ್ಪದೆ ಹಣ ಹಾಕುತ್ತೇವೆ. ಯಾರೂ ಎನೇ ಮಾತನಾಡಿದರೂ, ಬಿಜೆಪಿಯವರು ಹೇಳಿದರೂ ಕಿವಿಗೋಡಬೇಡಿ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.