ರಾಜ್ಯ

ಮಾನಸ ಸರೋವರ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಹಾಯಧನ; ಮಾರ್ಗಸೂಚಿ ಪ್ರಕಟ

ಮಾನಸ ಸರೋವರ ಯಾತ್ರಾರ್ಥಿಗಳಿಗೆ ತಲಾ 30 ಸಾವಿರ ರೂಪಾಯಿ ಹಾಗೂ ಚಾರ್‌ಧಾಮ್ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ತಲಾ 20 ಸಾವಿರ ರೂ, ಕಾಶಿ ಯಾತ್ರೆ ಕೈಗೊಂಡ 30,000 ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂ.

ಮಾನಸ ಸರೋವರ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಹಾಯಧನ; ಮಾರ್ಗಸೂಚಿ ಪ್ರಕಟ
ಕೈಲಾಸ-ಮಾನಸ ಸರೋವರ
Published On :

ಬೆಂಗಳೂರು: ರಾಜ್ಯದಿಂದ ಕೈಲಾಸ ಮಾನಸ ಸರೋವರ ಯಾತ್ರೆ ಮತ್ತು ಚಾರ್ ಧಾಮ್ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರ ಸಹಾಯಧನ ಪ್ರಕಟಿಸಿದ್ದು, ಈ ಸಂಬಂಧ ಮಾರ್ಗಸೂಚಿ ಹೊರಡಿಸಿದೆ.

ಮಾನಸ ಸರೋವರ ಯಾತ್ರಾರ್ಥಿಗಳಿಗೆ ತಲಾ 30 ಸಾವಿರ ರೂಪಾಯಿ ಹಾಗೂ ಚಾರ್‌ಧಾಮ್(ಗಂಗೋತ್ರಿ, ಯಮುನೋತ್ರಿ, ಕೇದಾರ್‌ನಾಥ್, ಬದರೀನಾಥ್) ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ತಲಾ 20 ಸಾವಿರ ರೂ, ಕಾಶಿ ಯಾತ್ರೆ ಕೈಗೊಂಡ 30,000 ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂ. ಸಹಾಯಧನ ಪಾವತಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಮುಜರಾಯಿ ಇಲಾಖೆ ಪ್ರಕಟಿಸಿದೆ.

ಚಾರ್‌ ಧಾಮ್ ಯಾತ್ರೆಯ ಮಾರ್ಗಸೂಚಿಗಳು

  • ಕರ್ನಾಟಕದ ಖಾಯಂ ನಿವಾಸಿಗಳು ಮಾತ್ರ ಈ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ.

  • ಚುನಾವಣಾ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಅನ್ನು ಅಪ್‌ಲೋಡ್ ಮಾಡಬೇಕು.

  • 45 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಈ ಯೋಜನೆಯಡಿ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ. 45 ವರ್ಷ ಮೇಲ್ಪಟ್ಟಿರುವ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಅಪ್‌ಲೋಡ್ ಮಾಡಬೇಕು.

  • ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರ ಅದೇ ವ್ಯಕ್ತಿಗೆ ಮತ್ತೊಮ್ಮೆ ಅನುದಾನ ನೀಡಲಾಗುವುದಿಲ್ಲ.

ಕಾಶಿ ಯಾತ್ರೆಯ ಮಾರ್ಗಸೂಚಿಗಳು

  • ಕರ್ನಾಟಕದ ಖಾಯಂ ನಿವಾಸಿಗಳು ಮಾತ್ರ ಈ ಧನ ಸಹಾಯ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

  • ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್ 1ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು. 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸಬೇಕು.

  • ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ, ಅದೇ ವ್ಯಕ್ತಿಗೆ ಎರಡನೇ ಬಾರಿ ಅನುದಾನ ನೀಡಲು ಪರಿಗಣಿಸಲಾಗುವುದಿಲ್ಲ.

  • ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮಾರ್ಗಸೂಚಿಯನ್ನು ಇಲಾಖೆಯ ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.