ರಾಜ್ಯ

ಚಿತ್ರಮಂದಿರಗಳು, ಸಬ್ಸಿಡಿ ಬಗ್ಗೆ ಗಮನ ಹರಿಸಿ, ಆರ್ಥಿಕ ನೆರವು ನೀಡ್ತೀವಿ: ಸಿಎಂ ಸಿದ್ದರಾಮಯ್ಯ

ಚಿತ್ರಮಂದಿರಗಳು ಮತ್ತು ಸಬ್ಸಿಡಿ ಬಗ್ಗೆ ಗಮನ ಹರಿಸಿ, ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ತಿಳಿಸಿದ್ದಾರೆ.

ಚಿತ್ರಮಂದಿರಗಳು, ಸಬ್ಸಿಡಿ ಬಗ್ಗೆ ಗಮನ ಹರಿಸಿ, ಆರ್ಥಿಕ ನೆರವು ನೀಡ್ತೀವಿ: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: ಚಿತ್ರಮಂದಿರಗಳು ಮತ್ತು ಸಬ್ಸಿಡಿ ಬಗ್ಗೆ ಗಮನ ಹರಿಸಿ, ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ತಿಳಿಸಿದ್ದಾರೆ.

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಕನ್ನಡ ಚಿತ್ರರಂಗದ ಬೆಳವಣಿಗೆಗೆ ಎಷ್ಟು ಸಾಧ್ಯವೋ ಅಷ್ಟು ಸಹಕಾರವನ್ನು ಸರ್ಕಾರದಿಂದ ನೀಡಲಾಗುವುದು ಎಂದರು.

ಕನ್ನಡದಲ್ಲಿ ಓಟಿಟಿ ವೇದಿಕೆ ತರಲು, ಸಂಬಂಧ ಪಟ್ಟವರ ಜೊತೆ ಮಾತನಾಡುತ್ತೀನಿ. ಡಾ.ರಾಜ್‍ಕುಮಾರ್ ಕನಸಿನಂತೆ ಖಂಡಿತಾ ಒಂದು ಫಿಲ್ಮ್ ಸಿಟಿ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ ಮುಖ್ಯಮಂತ್ರಿ,

ನೆನ್ನೆ ದೆಹಲಿಗೆ ಹೋಗಿದ್ದೆ. ಇವತ್ತು ಬರೋ ಸಾಧ್ಯತೆ ಕಮ್ಮಿ ಇತ್ತು.. ಕನ್ನಡ ಚಿತ್ರರಂಗದ ಮೇಲೆ ನನಗೆ ಅಪಾರ ಗೌರವವಿದ್ದು, ಮಿಸ್ ಮಾಡದೇ ಬರಬೇಕು ಅಂತಾ ಬಂದಿದ್ದೀನಿ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.