ಬಾಕಿ ಚಲನಚಿತ್ರ ಪ್ರಶಸ್ತಿಗಳ ಶೀಘ್ರದಲ್ಲೇ ನೀಡಲಾಗುವುದು: ಸಿಎಂ ಸಿದ್ದರಾಮಯ್ಯ
2019 ರಿಂದ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ನೀಡುವುದನ್ನು ಸರ್ಕಾರ ನಿಲ್ಲಿಸಿದ್ದು, 2019 ರಿಂದ ಬಾಕಿ ಉಳಿದಿರುವ ಎಲ್ಲಾ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಶೀಘ್ರದಲ್ಲೇ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಘೋಷಿಸಿದರು.

ಬೆಂಗಳೂರು: 2019 ರಿಂದ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ನೀಡುವುದನ್ನು ಸರ್ಕಾರ ನಿಲ್ಲಿಸಿದ್ದು, 2019 ರಿಂದ ಬಾಕಿ ಉಳಿದಿರುವ ಎಲ್ಲಾ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಶೀಘ್ರದಲ್ಲೇ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಘೋಷಿಸಿದರು.
15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಆವೃತ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ವಿಧ್ಯುಕ್ತ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, 2019 ರಿಂದ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ನೀಡುವುದನ್ನು ಸರ್ಕಾರ ನಿಲ್ಲಿಸಿದ್ದು, 2019 ರಿಂದ ಬಾಕಿ ಉಳಿದಿರುವ ಎಲ್ಲಾ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಶೀಘ್ರದಲ್ಲೇ ನೀಡಲಾಗುವುದು. ಕುವೆಂಪು ಅವರ ವಿಶ್ವ ಮಾನವ ಸಂಸ್ಕೃತಿಯನ್ನು ವಿಶ್ವದಲ್ಲಿ ಹೆಚ್ಚೆಚ್ಚು ಪಾಲಿಸುವಂಥ ವಾತಾವರಣ ಸೃಷ್ಟಿಯಾಗಬೇಕು. ಇದಕ್ಕೆ ವಿಶ್ವ ಸಿನಿಮಾಗಳು ನೆರವಾಗುತ್ತವೆ. 2019ರಿಂದ ಉತ್ತಮ ಸಿನಿಮಾಗಳ ಆಯ್ಕೆಗೆ ಸಮಿತಿ ರಚಿಸಿದ್ದೇವೆ. ಸಮಿತಿ ವರದಿ ಕೊಟ್ಟ ಕೂಡಲೇ ಪ್ರಶಸ್ತಿಗಳನ್ನು ಘೋಷಿಸಲಾಗುವುದು ಎಂದು ಹೇಳಿದರು.
ಬಳಿಕ 14 ವರ್ಷಗಳ ಸಿನಿಮೋತ್ಸವದ ಪಯಣವನ್ನು ಸ್ಮರಿಸಿದ ಅವರು, ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸಂಸ್ಕೃತಿಯನ್ನು ಪಾಲಿಸಿದಾಗ ಜಗತ್ತಲ್ಲಿ ಶಾಂತಿ ನೆಲೆಸುತ್ತದೆ. ಸಿನಿಮಾ ಬಹಳ ಪ್ರಭಾವಿ ಮಾಧ್ಯಮ. ನೋಡುಗರ ಮನಸ್ಸು, ಆಲೋಚನೆಯ ಮೇಲೆ ಪ್ರಭಾವ ಬೀರುವ ಶಕ್ತಿ ಅದಕ್ಕಿದೆ. ಸಿನಿಮಾಗಳ ಮೂಲಕ ದೇಶದ ಒಳಗಿನ, ಇತರೆ ದೇಶಗಳ ಜನರ ಸಂಸ್ಕೃತಿಯನ್ನು ಅರಿಯುವ ಮತ್ತು ಆ ಮೂಲಕ ನಮ್ಮ ಮಾನವೀಯ ಸಂಸ್ಕೃತಿಯನ್ನು ವಿಸ್ತರಿಸಿಕೊಳ್ಳಲು ನೆರವಾಗುತ್ತದೆ. ಇದಕ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ವೇಗವರ್ಧಕವಾಗಿ ಕೆಲಸ ಮಾಡುತ್ತದೆ ಎಂದು ತಿಳಿಸಿದರು.
ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, BIFFS ನ ಐದು ಆವೃತ್ತಿಗಳನ್ನು ನೋಡಿದ್ದೇನೆ. ಚಲನಚಿತ್ರೋತ್ಸವವನ್ನು ಆಯೋಜಿಸಲು ಹಲವಾರು ಉಪಕ್ರಮಗಳನ್ನು ತೆಗೆದುಕೊಂಡ ಚಲನಚಿತ್ರ ನಿರ್ಮಾಪಕರು ಮತ್ತು ಉತ್ಸಾಹಿಗಳಿಗೆ ಸಹಕಾರ ನೀಡಿದ್ದೇನೆ ಎಂದರು.
ಅಂಬೇಡ್ಕರ್ ಅವರ ಸಂವಿಧಾನ ಇತರೆ ದೇಶಗಳ ಸಂವಿಧಾನದಲ್ಲಿ ಇಲ್ಲದ ಸಾಮಾಜಿಕ ನ್ಯಾಯದ ಮೌಲ್ಯಗಳಿವೆ. ಅಂಬೇಡ್ಕರ್ ಮತ್ತು ಇವರ ಮೌಲ್ಯಗಳ ಕುರಿತಾದ ಸಿನಿಮಾಗಳಿಗೆ ಅಗತ್ಯವಾದ ಎಲ್ಲಾ ರೀತಿಯ ನೆರವನ್ನು ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



