ರಾಜ್ಯ

ಕುಡಿಯುವ ನೀರು -ಜಾನುವಾರುಗಳ ಮೇವಿನ ಕೊರತೆಯಾಗದಂತೆ ಕ್ರಮ: ಕೃಷ್ಣ ಬೈರೇಗೌಡ

ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಪರಿಸ್ಥಿತಿ ನಿಭಾಯಿಸಲು ಮತ್ತು ಜಾನುವಾರುಗಳಿಗೆ ಮೇವು ಅಭಾವ ತಪ್ಪಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಕುಡಿಯುವ ನೀರು -ಜಾನುವಾರುಗಳ ಮೇವಿನ ಕೊರತೆಯಾಗದಂತೆ ಕ್ರಮ: ಕೃಷ್ಣ ಬೈರೇಗೌಡ
ಸಚಿವ ಕೃಷ್ಣ ಬೈರೇಗೌಡ
Published On :

ಬೆಂಗಳೂರು: ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಪರಿಸ್ಥಿತಿ ನಿಭಾಯಿಸಲು ಮತ್ತು ಜಾನುವಾರುಗಳಿಗೆ ಮೇವು ಅಭಾವ ತಪ್ಪಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಶುಕ್ರವಾರ ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳ ಮಾಸಿಕ ಸಭೆಯ ನಡುವೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಖಾಸಗಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಸರ್ಕಾರ ಟೆಂಡರ್ ಕರೆದಿದೆ.

ಖಾಸಗಿ ನೀರಿನ ಟ್ಯಾಂಕರ್‌ಗಳನ್ನು ಸಿದ್ದಪಡಿಸುವಂತೆ ತಾಲೂಕು ಮತ್ತು ಪಂಚಾಯತ್‌ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಬಿಕ್ಕಟ್ಟಿನ ಸಂದರ್ಭದಲ್ಲಿ ಟ್ಯಾಂಕರ್ ಮೂಲಕ 24 ಗಂಟೆಯೊಳಗೆ ನೀರು ಪೂರೈಸಬೇಕು. ಖಾಸಗಿ ಬೋರ್‌ವೆಲ್‌ನಿಂದಲೂ ನೀರು ಪಡೆಯುತ್ತೇವೆ ಎಂದರು.

ಬರ ನಿರ್ವಹಣೆಗಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ರೂ. 725.92 ಕೋಟಿ ಹಾಗೂ ತಹಶೀಲ್ದಾರ್ ಖಾತೆಯಲ್ಲಿ ರೂ.135.40 ಕೋಟಿ ಸೇರಿದಂತೆ ಒಟ್ಟು ರೂ. 861.32 ಕೋಟಿ ಅನುದಾನವು ಬರ ಪರಿಹಾರ ಕಾರ್ಯ ಕೈಗೆತ್ತಿಕೊಳ್ಳಲು ಲಭ್ಯವಿದೆ.
ಸಚಿವ ಕೃಷ್ಣ ಬೈರೇಗೌಡ

ಡಿಸೆಂಬರ್‌ನಿಂದ ಈವರೆಗೆ ತಾಲೂಕು ಮಟ್ಟದ 600 ಸಭೆಗಳನ್ನು ನಡೆಸಲಾಗಿದೆ. ಫೆಬ್ರವರಿ ಒಂದೇ ತಿಂಗಳಲ್ಲಿ 154 ಟಾಸ್ಕ್ ಫೋರ್ಸ್‌ ಸಭೆ ನಡೆಸಲಾಗಿದೆ. ಬರ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಬರ ನಿರ್ವಹಣೆಗಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ರೂ. 725.92 ಕೋಟಿ ಹಾಗೂ ತಹಶೀಲ್ದಾರ್ ಖಾತೆಯಲ್ಲಿ ರೂ.135.40 ಕೋಟಿ ಸೇರಿದಂತೆ ಒಟ್ಟು ರೂ. 861.32 ಕೋಟಿ ಅನುದಾನವು ಬರ ಪರಿಹಾರ ಕಾರ್ಯ ಕೈಗೆತ್ತಿಕೊಳ್ಳಲು ಲಭ್ಯವಿದೆ ಎಂದು ಸಚಿವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.