ರಾಜ್ಯ

ಪಣಂಬೂರು ಬೀಚ್‌ನಲ್ಲಿ ಅಲೆಗಳ ರಭಸಕ್ಕೆ ಕೊಚ್ಚಿ ಹೋದ ಮೂವರು ಯುವಕರು

ಪಣಂಬೂರು ಬೀಚ್‌ನಲ್ಲಿ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಸಿಲುಕಿ ಮೂವರು ಯುವಕರು ಕೊಚ್ಚಿ ಹೋಗಿರುವ ಘಟನೆ ಭಾನುವಾರ ವರದಿಯಾಗಿದೆ.

ಪಣಂಬೂರು ಬೀಚ್‌ನಲ್ಲಿ ಅಲೆಗಳ ರಭಸಕ್ಕೆ ಕೊಚ್ಚಿ ಹೋದ ಮೂವರು ಯುವಕರು
ಮೂವರು ಯುವಕರು ಸಮುದ್ರ ಪಾಲು.!
Published On :

ಮಂಗಳೂರು: ಪಣಂಬೂರು ಬೀಚ್‌ನಲ್ಲಿ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಸಿಲುಕಿ ಮೂವರು ಯುವಕರು ಕೊಚ್ಚಿ ಹೋಗಿರುವ ಘಟನೆ ಭಾನುವಾರ ವರದಿಯಾಗಿದೆ.

ಲೈಫ್ ಗಾರ್ಡ್ ಎಚ್ಚರಿಕೆಯ ಹೊರತಾಗಿಯೂ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಮೂವರು ಯುವಕರು ನಾಪತ್ತೆಯಾಗಿದ್ದು, ಆಲೆಗಳಲ್ಲಿ ಕೊಚ್ಚಿ ಹೋದ ಯುವಕರನ್ನು ಮಿಲನ್(20), ಲಿಖಿತ್(18) ಹಾಗೂ ನಾಗರಾಜ್ (24) ಎಂದು ಗುರುತಿಸಲಾಗಿದೆ.

ಮಿಲನ್‌ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ. ಲಿಖಿತ್‌ ಕೈಕಂಬದ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ನಾಗರಾಜ್‌ ಬೈಕಂಪಾಡಿಯ ಕಂಪನಿಯಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಭಾನುವಾರ ಸಂಜೆ 6 ಗಂಟೆಯ ಸುಮಾರಿಗೆ ಪಣಂಬೂರು ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದ ವೇಳೆ ಬೃಹತ್‌ ಅಲೆಗಳ ಹೊಡೆತಕ್ಕೆ ಸಿಲುಕಿ ಮೂವರೂ ನೀರು ಪಾಲಾಗಿದ್ದಾರೆ. ನಾಪತ್ತೆಯಾದ ಯುವಕರಿಗಾಗಿ ಮುಳುಗತಜ್ಞರು ಹುಡುಕಾಟ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.