ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಅಗತ್ಯ ಬಿದ್ದರೆ ಎನ್‌ಐಎಗೆ ಹಸ್ತಾಂತರ ಬಗ್ಗೆ ಚಿಂತನೆ- ಸಿಎಂ ಸಿದ್ದರಾಮಯ್ಯ
ಅಗತ್ಯ ಬಿದ್ದರೆ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಹಸ್ತಾಂತರಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ಬೆಂಗಳೂರು: ಅಗತ್ಯ ಬಿದ್ದರೆ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಹಸ್ತಾಂತರಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.
ಮಾರ್ಚ್ 1 ರಂದು ಬ್ರೂಕ್‌ಫೀಲ್ಡ್‌ನ ಜನಪ್ರಿಯ ಉಪಾಹಾರ ಗೃಹದಲ್ಲಿ ಸಂಭವಿಸಿದ ಸ್ಫೋಟದಲ್ಲಿ 10 ಜನರು ಗಾಯಗೊಂಡ ಬಗ್ಗೆ ಮಾತನಾಡಿದ ಅವರು, ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಈ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಹೇಳಿದರು.
ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಾವು ಚಿಂತನೆ ನಡೆಸುತ್ತೇವೆ. ಇದೀಗ ತನಿಖೆ ಆರಂಭವಾಗಿದೆ. ಇದುವರೆಗೂ ಯಾವುದೇ ಆರೋಪಿಯನ್ನು ಬಂಧಿಸಿಲ್ಲ. ಎನ್ಐಎ ತನಿಖೆ ಅಗತ್ಯವಿದ್ದಲ್ಲಿ ನಾವು ಆ ಬಗ್ಗೆ ಯೋಚಿಸುತ್ತೇವೆ ಎಂದರು.
ಬ್ರಾಂಡ್ ಬೆಂಗಳೂರು ಎನ್ನುವ ಬದಲು ಬಾಂಬ್ ಬೆಂಗಳೂರು ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಬಿಜೆಪಿ ಆಡಳಿತಾವಧಿಯಲ್ಲಿ ನಾಲ್ಕು ಬಾಂಬ್ ಸ್ಫೋಟಗಳು ನಡೆದಿದ್ದವು. ಆಗ ಅದನ್ನು ಏನೆಂದು ಕರೆಯಬೇಕು? ಮಂಗಳೂರು ಕುಕ್ಕರ್ ಸ್ಫೋಟ ನಡೆದಾಗ ಆಡಳಿತ ನಡೆಸುತ್ತಿದ್ದವರು ಯಾರು? ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಎದುರು ಸ್ಫೋಟ ಸಂಭವಿಸಿದೆ ಎಂದು ಕಿಡಿಕಾರಿದರು.
ಆಗ ಆಳುತ್ತಿದ್ದವರು ಯಾರು? ಎನ್ಐಎ, ಐಬಿ ಉಸ್ತುವಾರಿ ಯಾರು? ಇದು ಅವರ ವೈಫಲ್ಯವಲ್ಲವೇ? ಬಾಂಬ್ ಸ್ಫೋಟಕ್ಕೆ ನಾನು ಬೆಂಬಲ ನೀಡುತ್ತಿಲ್ಲ. ನಾನು ಇದನ್ನು ಖಂಡಿಸುತ್ತೇನೆ. ಆದರೆ, ಬಿಜೆಪಿ ಇದರಲ್ಲಿ ರಾಜಕೀಯ ಮಾಡಬಾರದು ಎಂದರು.
ಬಾಂಬ್ ಸ್ಫೋಟಗಳು ಎಂದಿಗೂ ಹಾಸ್ಯಾಸ್ಪದ ಘಟನೆಗಳಲ್ಲ. ಸರ್ಕಾರಗಳು ಇದನ್ನು ಯಾವಾಗಲೂ ಗಂಭೀರವಾಗಿ ಪರಿಗಣಿಸಿವೆ. ಸಾರ್ವಜನಿಕ ಸುರಕ್ಷತೆ ಮತ್ತು ಭದ್ರತೆ ಬಹಳ ಮುಖ್ಯ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




