ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಕೊನೆಗೂ ಮೂವರು ಆರೋಪಿಗಳ ಬಂಧನ
ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಪೊಲೀಸರು ಸೋಮವಾರ ಮೂವರನ್ನು ಬಂಧಿಸಿದ್ದಾರೆ.

ಬೆಂಗಳೂರು: ಇತ್ತೀಚಿಗೆ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಪೊಲೀಸರು ಸೋಮವಾರ ಮೂವರನ್ನು ಬಂಧಿಸಿದ್ದಾರೆ.
ವಿಧಾನಸೌಧದಲ್ಲಿ ಕರ್ತವ್ಯದಲ್ಲಿದ್ದ ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶಿವಕುಮಾರ್ ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದ ವಿಧಾನಸೌಧ ಪೊಲೀಸ್ ಠಾಣೆಯ ಪೊಲೀಸರು ಇಂದು ಸಂಜೆ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ದೆಹಲಿ ಮೂಲದ ಇಲ್ತಿಯಾಜ್, ಆರ್.ಟಿ. ನಗರದ ಮುನಾವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಎಂದು ಗುರುತಿಸಲಾಗಿದ್ದು, ಸದ್ಯ ಈ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ಬಳಿಕ ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ.
ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಆರೋಪಿಗಳ ಬಂಧನವನ್ನು ಖಚಿತಪಡಿಸಿರುವ ಬೆಂಗಳೂರಿನ ಕೇಂದ್ರ ವಿಭಾಗದ ಪೊಲೀಸರು, ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಎಫ್ಎಸ್ಎಲ್ ವರದಿ, ಸಾಂದರ್ಭಿಕ ಸಾಕ್ಷ್ಯಗಳು, ಆರೋಪಿಗಳ ಹೇಳಿಕೆ ಹಾಗೂ ತನಿಖೆ ವೇಳೆ ಸಿಕ್ಕ ಸಾಕ್ಷ್ಯಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಿದ್ದೇವೆ. ಸದ್ಯ ಆರೋಪಿಗಳ ವೈದ್ಯಕೀಯ ಪರೀಕ್ಷೆ ನಡೀತಾ ಇದೆ. ವೈದ್ಯಕೀಯ ಪರೀಕ್ಷೆ ಬಳಿಕ ಕೋರಮಂಗಲದ ನ್ಯಾಯಾಧೀಶರ ಮನೆಯಲ್ಲಿ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆಯುವುದಾಗಿ ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



