ರಾಜ್ಯ

ಲೋಕಸಭಾ ಚುನಾವಣೆ: ರಾಜ್ಯದಲ್ಲಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ; ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ 20 ಲೋಕಸಭಾ ಸ್ಥಾನಗಳನ್ನು ಕಾಂಗ್ರೆಸ್‌ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಚುನಾವಣೆ: ರಾಜ್ಯದಲ್ಲಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ; ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Published On :

ಚಿಕ್ಕಮಗಳೂರು: ರಾಜ್ಯದಲ್ಲಿ 20 ಲೋಕಸಭಾ ಸ್ಥಾನಗಳನ್ನು ಕಾಂಗ್ರೆಸ್‌ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷವು ಲೋಕಸಭೆ ಚುನಾವಣೆಗೆ ಸಿದ್ಧತೆಯಲ್ಲಿ ನಿರತವಾಗಿದ್ದು, ಚುನಾವಣೆಯಲ್ಲಿ ಪಕ್ಷ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಕಾರಣ. ಬರಗಾಲ ಬಂದಿದೆ ನಿಜ. ಆದರೆ, ಅಧಿಕಾರ ಹಂಚಿಕೆ ಮಾಡಬಾರದೆ, ರೂ.3.71 ಲಕ್ಷ ಕೋಟಿ ಮೊತ್ತದ ಬಜೆಟ್ ಮಂಡಿಸಿದ್ದೇವೆ. ನಿಗಮ ಮಂಡಳಿ ಅಧ್ಯಕ್ಷರಿಗೆ ಅಧಿಕಾರ ನೀಡಲು ಹೆಚ್ಚು ಹಣ ವೆಚ್ಚವಾಗುವುದಿಲ್ಲ.

ಚಿಕ್ಕಮಗಳೂರು ತಾಲೂಕು ಬರಪಟ್ಟಿಗೆ ಸೇರಿಸಲು ಹಲವು ಮಾನದಂಡಗಳಿವೆ. ಅವುಗಳ ಅನುಸಾರ 17 ತಾಲೂಕುಗಳು ಬರ ಪಟ್ಟಿಯಿಂದ ಹೊರಗಿವೆ. ಅದರಲ್ಲಿ ಚಿಕ್ಕಮಗಳೂರು ಕೂಡ ಒಂದು. ವ್ಯಾಪ್ತಿಗೆ ಬಂದಿದ್ದರೆ ಎಲ್ಲಾ ತಾಲೂಕುಗಳನ್ನು ಪರಪಟ್ಟಿಗೆ ಸೇರಿಸುತ್ತಿದ್ದೆವು ಎಂದು ತಿಳಿಸಿದರು.

‘ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚಾಗಿರುವ ಮಂಗನ ಕಾಯಿಲೆ ತಡೆಗೆ ಕ್ರಮ ಕೈಗೊಳ್ಳುವ ಬಗ್ಗೆ ಆರೋಗ್ಯ ಸಚಿವರೊಂದಿಗೆ ಮಾತನಾಡುತ್ತೇನೆ. ಅಕ್ರಮ ಭೂಮಂಜೂರಾತಿ ಬಗ್ಗೆ ತಹಶೀಲ್ದಾರ್‌ಗಳ ತಂಡ ನಡೆಸಿರುವ ತನಿಖಾ ವರದಿ ಕಂದಾಯ ಸಚಿವರ ಬಳಿ ಇದ್ದು, ಅವರೊಂದಿಗೂ ಈ ಬಗ್ಗೆ ಚರ್ಚಿಸುತ್ತೇನೆ’ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.