ಗದಗ: ಇಬ್ಬರು ಮಹಿಳೆಯರು ಸೇರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಗದಗ ಜಿಲ್ಲೆಯ ಹಳ್ಳಿಯೊಂದರಲ್ಲಿ ಟ್ರ್ಯಾಕ್ಟರ್ ಸಾಲಕ್ಕೆ ಸಂಬಂಧಿಸಿದಂತೆ ಉಂಟಾದ ವಿವಾದದ ನಂತರ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಗದಗ: ಜಿಲ್ಲೆಯ ಹಳ್ಳಿಯೊಂದರಲ್ಲಿ ಟ್ರ್ಯಾಕ್ಟರ್ ಸಾಲಕ್ಕೆ ಸಂಬಂಧಿಸಿದಂತೆ ಉಂಟಾದ ವಿವಾದದ ನಂತರ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮೃತರನ್ನು 49 ವರ್ಷದ ರೇಣುಕಾ ತೇಲಿ, ಆಕೆಯ ಮಗ 22 ವರ್ಷದ ಮಂಜುನಾಥ ತೇಲಿ ಮತ್ತು ಚಿಕ್ಕಮ್ಮ 47 ವರ್ಷದ ಸಾವಕ್ಕ ತೇಲಿ ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ ಟ್ರ್ಯಾಕ್ಟರ್ ಸಾಲ ಮರುಪಾವತಿ ವಿಚಾರವಾಗಿ ತಾಯಿ ರೇಣುಕಾ ಹಾಗೂ ಮಗ ಮಂಜುನಾಥ್ ನಡುವೆ ಜಗಳವಾಗಿತ್ತು. ಬ್ಯಾಂಕ್‌ನಿಂದ 4 ಲಕ್ಷ ಸಾಲ ಪಡೆದು ಕುಟುಂಬ ಟ್ರ್ಯಾಕ್ಟರ್ ಖರೀದಿಸಿತ್ತು.
ಜಗಳದ ನಂತರ ರೇಣುಕಾ ತೇಲಿ ಮನೆಯಿಂದ ಹೊರಬಂದು ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯನ್ನು ಹಿಂಬಾಲಿಸಿದ ಆಕೆಯ ಮಗ ಮಂಜುನಾಥ್ ಕೂಡ ಆಕೆಯನ್ನು ತಡೆಯಲು ಯತ್ನಿಸಿದಾಗ ರೈಲಿನಡಿಗೆ ಬಿದ್ದಿದ್ದಾನೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಈ ಸಾವಿನ ವಿಷಯ ತಿಳಿದ ನಂತರ ಮಂಜುನಾಥ್ ಅವರ ತಾಯಿಯ ತಂಗಿ ಸಾಕವ್ವ ತೇಲಿ ಕೂಡ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


