ಪಾಕ್ ಪರ ಘೋಷಣೆ: ಬಂಧಿತ ಆರೋಪಿಗಳನ್ನು ಕರೆತಂದು ಪೊಲೀಸರಿಂದ ವಿಧಾನಸೌಧದಲ್ಲಿ ಇಂದು ಸ್ಥಳ ಮಹಜರು
ಪೊಲೀಸರು ಆರೋಪಿಗಳಾದ ಇಲ್ತಾಜ್, ಮುನಾವರ್, ಮೊಹಮ್ಮದ್ ನಾಶಿಪುಡಿ ಅವರನ್ನು ಕೋರಮಂಗಲದಲ್ಲಿರುವ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯದ ಜಡ್ಜ್ ಮುಂದೆ ಹಾಜರುಪಡಿಸಿದ್ದರು.

ಬೆಂಗಳೂರು: ವಿಧಾನಸೌಧ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬಂಧಿತ ಮೂವರು ಆರೋಪಿಗಳನ್ನು ಎರಡು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸರು ಆರೋಪಿಗಳಾದ ಇಲ್ತಾಜ್, ಮುನಾವರ್, ಮೊಹಮ್ಮದ್ ನಾಶಿಪುಡಿ ಅವರನ್ನು ಕೋರಮಂಗಲದಲ್ಲಿರುವ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯದ ಜಡ್ಜ್ ಮುಂದೆ ಹಾಜರುಪಡಿಸಿದ್ದರು.
ವಿಧಾನಸೌಧದ ಆವರಣದಲ್ಲಿಯೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ ವಿಧಾನಸೌಧ ಪೊಲೀಸರು, ದೆಹಲಿ ಮೂಲದ ಇಲ್ತಾಜ್, ಆರ್.ಟಿ. ನಗರ ಮೂಲದ ಮುನಾವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಅವರನ್ನು ಬಂಧಿಸಿದ್ದಾರೆ.
ಇಂದು ಪೊಲೀಸರಿಂದ ಸ್ಥಳ ಮಹಜರು: ಬಂಧಿತ ಆರೋಪಿಗಳನ್ನು ಕರೆತಂದು ಪೊಲೀಸರು ಇಂದು ವಿಧಾನಸೌಧ ಆವರಣದಲ್ಲಿ ಸ್ಥಳ ಮಹಜರು ನಡೆಸಲಿದ್ದಾರೆ.
ಮೂರು ದಿನ ಪೊಲೀಸ್ ಕಸ್ಟಡಿಗೆ: ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾಗಿದ್ದ ಮೂವರಿಗೆ 39 ಎಸಿಎಂಎಂ ನ್ಯಾಯಾಲಯ 3 ದಿನಗಳ ಪೊಲೀಸ್ ಕಸ್ಟಡಿ ನೀಡಿದೆ.
ಎಫ್ಎಸ್ಎಲ್ ವರದಿ, ಲಭ್ಯವಿರುವ ಸಾಕ್ಷಿಗಳು ಮತ್ತು ಸಾಕ್ಷ್ಯದ ಆಧಾರದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ವಿಭಾಗ ಡಿಸಿಪಿ ತಿಳಿಸಿದ್ದಾರೆ.
ನಿನ್ನೆ ಸಾಯಂಕಾಲ ಅಶೋಕನಗರ ಪೊಲೀಸರು ದೆಹಲಿ ಮೂಲದ ಇಲ್ತಾಜ್, ಆರ್ ಟಿ ನಗರದ ಮುನಾವರ್ ಹಾಗೂ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಬಂಧಿಸಿದ್ದರು. ಬಳಿಕ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಬಳಿಕ ಪೊಲೀಸರು ಕೋರಮಂಗಲದ 39ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



