KPSC ಕಾರ್ಯದರ್ಶಿ ಲತಾಕುಮಾರಿ ಎತ್ತಂಗಡಿ: ಆಯೋಗದ ಅಧ್ಯಕ್ಷರು ಸದಸ್ಯರ ನಡುವೆ ಜಟಾಪಟಿ; 6 ತಿಂಗಳಲ್ಲಿ ಇಬ್ಬರ ವರ್ಗ!
ಫೆ. 7 ರಿಂದ ರಜೆ ಮೇಲೆ ತೆರಳಿರುವ ಕೆಪಿಎಸ್‌ಸಿ ಕಾರ್ಯದರ್ಶಿ ಕೆ.ಎಸ್. ಲತಾಕುಮಾರಿ ಅವರನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಕಾರ್ಯನಿರ್ವಾಹಕ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು: ಫೆ. 7 ರಿಂದ ರಜೆ ಮೇಲೆ ತೆರಳಿರುವ ಕೆಪಿಎಸ್‌ಸಿ ಕಾರ್ಯದರ್ಶಿ ಕೆ.ಎಸ್. ಲತಾಕುಮಾರಿ ಅವರನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಕಾರ್ಯನಿರ್ವಾಹಕ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ.
ಆಯೋಗದ ಕಾನೂನು ಕೋಶದ ಮುಖ್ಯಸ್ಥರ ನೇಮಕ ಸಂಬಂಧ ಆಯೋಗದ ಅಧ್ಯಕ್ಷರು, ಸದಸ್ಯರು ಮತ್ತು ಕಾರ್ಯದರ್ಶಿ ನಡುವೆ ಮೂರ್ನಾಲ್ಕು ತಿಂಗಳಿಂದ ತೀವ್ರ ಸಂಘರ್ಷ ನಡೆಯುತ್ತಿತ್ತು.
ಆ ಹಿನ್ನೆಲೆಯಲ್ಲಿ ಸಂಘರ್ಷವನ್ನು ತಾತ್ಕಾಲಿಕವಾಗಿ ಶಮನಗೊಳಿಸಲು ಫೆಬ್ರವರಿಯಲ್ಲಿ 10 ದಿನ ಕಡ್ಡಾಯ ರಜೆ ಮೇಲೆ ಕಳುಹಿಸಿದ್ದ ಸರ್ಕಾರ ಇದೀಗ ಅವರನ್ನು ಬೇರೆ ಹುದ್ದೆಗೆ ವರ್ಗಾವಣೆ ಮಾಡಿದೆ.
ಲತಾಕುಮಾರಿ ಅವರು ರಜೆಯಲ್ಲಿ ತೆರಳಿದ ಬಳಿಕ ಕಾರ್ಯದರ್ಶಿ ಹುದ್ದೆಯ ಹೊಣೆಯನ್ನು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಕೆ. ರಾಕೇಶ್ ಕುಮಾರ್ ಅವರಿಗೆ ವಹಿಸಲಾಗಿತ್ತು. ಲತಾಕುಮಾರಿ ಅವರನ್ನು ವರ್ಗಾವಣೆ ಮಾಡಿರುವುದರಿಂದ ರಾಕೇಶ್ ಕುಮಾರ್ ಅವರಿಗೇ ಕಾರ್ಯದರ್ಶಿಯ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಲತಾಕುಮಾರಿ ಅವರು ಸೆ.13 ರಂದು ಆಯೋಗದ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಅದಕ್ಕೂ ಮುನ್ನ ಕಾರ್ಯದರ್ಶಿಯಾಗಿದ್ದ ವಿಕಾಸ್ ಕಿಶೋರ್ ಸುರಳ್ಕರ್ ಅವರನ್ನೂ ಸರ್ಕಾರ ಆಯೋಗದ ಅಧ್ಯಕ್ಷರು, ಸದಸ್ಯರ ಒತ್ತಡಕ್ಕೆ ಮಣಿದು ವರ್ಗಾವಣೆ ಮಾಡಿತ್ತು. ಇದೀಗ ಮತ್ತೆ ಲತಾಕುಮಾರಿ ಅವರನ್ನು ವರ್ಗಾವಣೆ ಮಾಡಿರುವುದರಿಂದ ಆರು ತಿಂಗಳಲ್ಲಿಇಬ್ಬರು ಕಾರ್ಯದರ್ಶಿಗಳ ವರ್ಗಾವಣೆಯಾದಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



