ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಳ್ಗಿಚ್ಚು: ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ
ಬಿಳಿಗಿರಿರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಬಿಆರ್‌ಟಿ) ಇತ್ತೀಚೆಗೆ ಸಂಭವಿಸಿದ ಕಾಡ್ಗಿಚ್ಚಿನಿಂದ ಉಂಟಾದ ಹಾನಿಯ ನಿಖರವಾದ ಮಾಹಿತಿ ಕೋರಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಇಲಾಖೆಗೆ ಪತ್ರ ಬರೆದಿದ್ದಾರೆ.

ಹುಬ್ಬಳ್ಳಿ: ಬಿಳಿಗಿರಿರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಬಿಆರ್‌ಟಿ) ಇತ್ತೀಚೆಗೆ ಸಂಭವಿಸಿದ ಕಾಳ್ಗಿಚ್ಚಿನಿಂದ ಉಂಟಾದ ಹಾನಿಯ ನಿಖರವಾದ ಮಾಹಿತಿ ಕೋರಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಇಲಾಖೆಗೆ ಪತ್ರ ಬರೆದಿದ್ದಾರೆ.
ಗ್ರೌಂಡ್ ರಿಪೋರ್ಟ್ ಪಡೆಯಲು ನೋಡಲ್ ಅಧಿಕಾರಿಯನ್ನೂ ಅವರು ನೇಮಿಸಿದ್ದರು.
ಬಜೆಟ್ ಅಧಿವೇಶನದ ಸಂದರ್ಭದಲ್ಲಿ, ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಎಸ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಖಂಡ್ರೆ, ಬಿಆರ್‌ಟಿ ಅಭಯಾರಣ್ಯದಲ್ಲಿ ಫೆಬ್ರುವರಿಯಲ್ಲಿ ಸಂಭವಿಸಿದ ಕಾಡ್ಗಿಚ್ಚಿನಲ್ಲಿ ಸುಮಾರು 10 ಎಕರೆ ಅರಣ್ಯಕ್ಕೆ ಹಾನಿಯಾಗಿದೆ ಎಂದು ಹೇಳಿದರು. ಆದಾಗ್ಯೂ, ಬೆಂಕಿಯಿಂದ ಉಂಟಾದ ಹಾನಿಯ ಪ್ರಮಾಣವನ್ನು ತಪ್ಪಾಗಿ ವರದಿ ಮಾಡಲಾಗಿದೆ ಮತ್ತು ಆರಂಭದಲ್ಲಿ ಹೇಳಿದ್ದಕ್ಕಿಂತ ಹೆಚ್ಚಿನದಾಗಿದೆ ಎಂಬುದು ಸಚಿವರ ಗಮನಕ್ಕೆ ಬಂದಿತು ಎಂದು ಮೂಲಗಳು ತಿಳಿಸಿವೆ.
ಬಿಳಿಗಿರಿರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದಲ್ಲಿ ಸೋಮವಾರ ಕಾಳ್ಗಿಚ್ಚಿನಿಂದಾಗಿ 50 ಎಕರೆಗೂ ಹೆಚ್ಚು ಕಾಡು ಸುಟ್ಟು ಭಸ್ಮವಾಗಿದೆ. ಕುರಿಮಂದೆ, ಬಜೆಬಾವಿ ಪ್ರದೇಶದ ಮೂರು ಕಡೆಯಲ್ಲಿ ಕಾಳ್ಗಿಚ್ಚು ಕಾಣಿಸಿಕೊಂಡಿದ್ದು, ಸದ್ಯ ಬೆಂಕಿ ನಂದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



