5, 8, 9 ಮತ್ತು 11ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು
ಮಹತ್ವದ ಬೆಳವಣಿಗೆಯಲ್ಲಿ 5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಗುರುವಾರ ಅನುಮತಿ ನೀಡಿದೆ.

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ 5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಗುರುವಾರ ಅನುಮತಿ ನೀಡಿದೆ.
ನಿನ್ನೆ 5, 8, 9 ಮತ್ತು 11ನೇ ತರಗತಿಗೆ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ನಿಗದಿಯಂತೆ ಸೋಮವಾರದಿಂದ ಬೋರ್ಡ್ ಪರೀಕ್ಷೆಗಳು ನಡೆಯಲಿವೆ.
2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು. ಆದರೆ ರಾಜ್ಯ ಸರ್ಕಾರ ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿತ್ತು.
9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಗಂಭೀರತೆ ಕಾಣಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



