ರಾಜ್ಯ

ಮುಂದಿನ ವರ್ಷ 'ವಚನ ವಿಶ್ವವಿದ್ಯಾಲಯ' ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮುಂದಿನ ವರ್ಷ 'ವಚನ ವಿಶ್ವವಿದ್ಯಾಲಯ' ಸ್ಥಾಪನೆ ಮಾಡಲು ನಿರ್ಧರಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬಸವಕಲ್ಯಾಣದಲ್ಲಿ ಘೋಷಿಸಿದ್ದಾರೆ.

ಮುಂದಿನ ವರ್ಷ 'ವಚನ ವಿಶ್ವವಿದ್ಯಾಲಯ' ಸ್ಥಾಪನೆ: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Published On :

ಬೀದರ್‌: ರಾಜ್ಯದಲ್ಲಿ ಮುಂದಿನ ವರ್ಷ 'ವಚನ ವಿಶ್ವವಿದ್ಯಾಲಯ' ಸ್ಥಾಪನೆ ಮಾಡಲು ನಿರ್ಧರಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬಸವಕಲ್ಯಾಣದಲ್ಲಿ ಘೋಷಿಸಿದ್ದಾರೆ.

ಇಂದು ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದಕ್ಕಾಗಿ 160 ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ ಲಿಂಗಾಯತ ಮಠಾಧೀಶರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿಎಂ, ಜಾತಿ, ವರ್ಗ, ಅಸಮಾನತೆ ಇಲ್ಲದ ಮನುಷ್ಯತ್ವದ ಸಮಾಜ ನಿರ್ಮಾಣ ಬಸವಣ್ಣರ ಗುರಿಯಾಗಿತ್ತು. ಹೀಗಾಗಿ ಬುದ್ಧ, ಬಸವ, ಅಂಬೇಡ್ಕರ್ ನನಗೆ ಮಾರ್ಗದರ್ಶಕರು. ಇವರ ವಿಚಾರಗಳು ಇಂದು, ನಾಳೆ ಮಾತ್ರವಲ್ಲ ಯಾವತ್ತೂ ಶಾಶ್ವತ ಎಂದರು.

ಜಾತಿ ಪದ್ಧತಿ, ಅಸ್ಪೃಶ್ಯತೆ, ಅಸಮಾನತೆ, ಶೋಷಣೆ ಹಾಗೂ ಧಾರ್ಮಿಕ ಢಂಬಾಚಾರದ ವಿರುದ್ಧ ಬಂಡೆದ್ದ ಬಸವಾದಿ ಶರಣರು ಜನರಲ್ಲಿ ಅರಿವುಮೂಡಿಸಲು ಆಯ್ದುಕೊಂಡ ಸಾಧನ "ವಚನ ಸಾಹಿತ್ಯ." ವಚನಗಳಲ್ಲಿ ಬಸವೇಶ್ವರರಾದಿಯಾಗಿ ನೂರಾರು ಶರಣರ ಬದುಕಿನ ಅನುಭವದ ಸಾರವಿದೆ, ಅಂಧಶ್ರದ್ದೆ- ಮೌಢ್ಯದ ವಿರುದ್ಧದ ಆಕ್ರೋಶವಿದೆ, ಜ್ಞಾನದ ಬೆಳಕಿದೆ ಎಂದು ಸಿಎಂ ಹೇಳಿದರು.

ಶರಣರ ವಚನಗಳು ಹಾಳೆಗಳಿಗೆ ಸೀಮಿತವಾಗಬಾರದು, ವಚನಗಳ ಪ್ರತಿ ಅಕ್ಷರ ಜನರ ಎದೆಗೆ ಇಳಿಯಬೇಕು. ಆ ಮೂಲಕ ಬಸವಣ್ಣನವರ ಸಮಸಮಾಜದ ಕನಸು ಸಾಕಾರಗೊಳ್ಳಬೇಕು. ಈ ಉದ್ದೇಶದಿಂದ ಮುಂದಿನ ವರ್ಷ 'ವಚನ ವಿಶ್ವವಿದ್ಯಾಲಯ' ಸ್ಥಾಪನೆ ಮಾಡಬೇಕೆಂದು ನಿರ್ಧರಿಸಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.