ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ 3 ಯುವಕರ ಸಾವು
ಕಾವೇರಿ ನದಿಯಲ್ಲಿ ಮುಳುಗಿ 3 ಯುವಕರು ಸಾವನ್ನಪ್ಪಿರುವ ಘಟನೆ ಗುರುವಾರ ಕೊಡಗಿನ ಕುಶಾಲನಗರದಲ್ಲಿ ವರದಿಯಾಗಿದೆ.

ಕೊಡಗು: ಕಾವೇರಿ ನದಿಯಲ್ಲಿ ಮುಳುಗಿ 3 ಯುವಕರು ಸಾವನ್ನಪ್ಪಿರುವ ಘಟನೆ ಗುರುವಾರ ಕೊಡಗಿನ ಕುಶಾಲನಗರದಲ್ಲಿ ವರದಿಯಾಗಿದೆ.
ಕೊಡಗು ಜಿಲ್ಲೆ (Kodagu News) ಕುಶಾಲ ನಗರ ಸಮೀಪದ ಕೂಡಿಗೆಯಲ್ಲಿ ಈ ದುರಂತ ಸಂಭವಿಸಿದ್ದು, ಕಾವೇರಿ ನದಿಯಲ್ಲಿ (Drowned in River Cauvery) ಮುಳುಗಿ ಮೂವರು ಯುವಕರು ಮೃತಪಟ್ಟಿದ್ದಾರೆ.
ಮೂಲಗಳ ಪ್ರಕಾರ ಕುಶಾಲ ನಗರದ ಕೂಡಿಗೆಯಲ್ಲಿ ಕಾವೇರಿ ನದಿಗೆ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾಗಿದ್ದು, ಮೃತರನ್ನು ವಿನೋದ್, ಸಚಿನ್, ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಈ ಮೂವರು ಯುವಕರು ಮುಳ್ಳುಸೋಗೆ, ಚಿಕ್ಕತ್ತೂರು, ಹೆಬ್ಬಾಲೆ ಮೂಲದದವರು ಎಂದು ತಿಳಿದುಬಂದಿದೆ.
ಜತೆಯಾಗಿ ಈಜಲು ತೆರಳಿದ್ದ ಮೂವರು ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿ ಸಾವನ್ನಪ್ಪಿರುವ ಶಂಕೆ ಇದ್ದು, ಯುವಕರು ಒಂದೇ ಕಾರಿನಲ್ಲಿ ಬಂದಿದ್ದರು ಎನ್ನಲಾಗಿದೆ. ಕಾರು ನದಿಯ ಬದಿಯಲ್ಲಿ ನಿಂತಿದೆ. ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದುಬಾರೆಯ ರ‍್ಯಾಫ್ಟಿಂಗ್ ಸಿಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ನಾಪತ್ತೆಯಾದವರ ಹುಡುಕಾಟ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




