ರಾಜ್ಯ

ಅಂತಾರಾಷ್ಟ್ರೀಯ ಮಹಿಳಾ ದಿನ ಮಹಿಳೆಯರು ಎದುರಿಸುತ್ತಿರುವ ಸವಾಲುಗಳ ಮೇಲೂ ಬೆಳಕು ಚೆಲ್ಲಲಿ: ಸಿಎಂ ಸಿದ್ದರಾಮಯ್ಯ

ಅಂತಾರಾಷ್ಟ್ರೀಯ ಮಹಿಳಾ ದಿನವು ಮಹಿಳೆಯರ ಸಾಧನೆಗಳನ್ನು ಗುರುತಿಸಿ, ಗೌರವಿಸುವುದಕ್ಕಷ್ಟೇ ಸೀಮಿತವಾಗದೆ ಅವರು ಎದುರಿಸುತ್ತಿರುವ ಸವಾಲುಗಳ ಮೇಲೆಯೂ ಬೆಳಕು ಚೆಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಮಹಿಳಾ ದಿನ ಮಹಿಳೆಯರು ಎದುರಿಸುತ್ತಿರುವ ಸವಾಲುಗಳ ಮೇಲೂ ಬೆಳಕು ಚೆಲ್ಲಲಿ: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನವು ಮಹಿಳೆಯರ ಸಾಧನೆಗಳನ್ನು ಗುರುತಿಸಿ, ಗೌರವಿಸುವುದಕ್ಕಷ್ಟೇ ಸೀಮಿತವಾಗದೆ ಅವರು ಎದುರಿಸುತ್ತಿರುವ ಸವಾಲುಗಳ ಮೇಲೆಯೂ ಬೆಳಕು ಚೆಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಾಡಿನ ನನ್ನ ಅಕ್ಕ ತಂಗಿಯರಿಗೆ, ತಾಯಂದಿರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳು. ಅಂತಾರಾಷ್ಟ್ರೀಯ ಮಹಿಳಾ ದಿನವು ಮಹಿಳೆಯರ ಸಾಧನೆಗಳನ್ನು ಗುರುತಿಸಿ, ಗೌರವಿಸುವುದಕ್ಕಷ್ಟೇ ಸೀಮಿತವಾಗದೆ ಅವರು ಎದುರಿಸುತ್ತಿರುವ ಸವಾಲುಗಳ ಮೇಲೆಯೂ ಬೆಳಕು ಚೆಲ್ಲಬೇಕು. ಲಿಂಗಾಧಾರಿತ ಅಸಮಾನತೆ ಮತ್ತು ಶೋಷಣೆಯ ವಿರುದ್ಧದ ಮಹಿಳೆಯರ ಹೋರಾಟದಲ್ಲಿ ನಾವೆಲ್ಲರೂ ಜೊತೆಯಲ್ಲಿ ನಿಲ್ಲಬೇಕು ಎಂದು ಹೇಳಿದ್ದಾರೆ.

ಅವಕಾಶಗಳಿಂದ ವಂಚಿತವಾಗಿರುವ ಮಹಿಳೆಯರಿಗೆ ಎಲ್ಲಾ ರಂಗಗಳಲ್ಲಿ ಸಮಾನ ಅವಕಾಶ ಮತ್ತು ಪ್ರಾತಿನಿಧ್ಯ ದೊರಕುವಂತೆ ಮಾಡುವುದು ಇಂದಿನ ಅಗತ್ಯವಾಗಿದೆ. ಇದು ಬುದ್ಧ, ಬಸವಣ್ಣ, ಅಂಬೇಡ್ಕರರು ಸಾರಿದ ಸಮಸಮಾಜದ ಆಶಯ ಕೂಡ. ಈ ದಿಸೆಯಲ್ಲಿ ಪ್ರಯತ್ನಗಳು ಸಾಗಲಿ.

ನಮ್ಮ ಹಿಂದಿನ ಮತ್ತು ಇಂದಿನ ಸರ್ಕಾರದ ಅರ್ಧದಷ್ಟು ಯೋಜನೆಗಳು ಮಹಿಳಾಕೇಂದ್ರಿತವಾಗಿರುವುದನ್ನು ನಾಡು ಗಮನಿಸಿದೆ. ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳು ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸಿ, ಈ ದಿನದ ಆಚರಣೆಯನ್ನು ಮತ್ತಷ್ಟು ಅರ್ಥಪೂರ್ಣವಾಗಿಸಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.