ರಾಜ್ಯ

ಬಳ್ಳಾರಿ: ಶಾಸಕ ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ವಿರುದ್ಧ ಎಫ್ ಐ ಆರ್ ದಾಖಲು

ಗಂಗಾವತಿ ಶಾಸಕ ಜನಾರ್ದನರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ವಿರುದ್ದ ಎಫ್ ಐಆರ್ ದಾಖಲು ಮಾಡಲಾಗಿದೆ. ಬಳ್ಳಾರಿ ನಗರದ ಗಾಂಧಿನಗರ ಪೊಲೀಸ್ ಠಾಣೆಯಲ್ಲಿಎಫ್ ಐಆರ್ ದಾಖಲಾಗಿದೆ.

ಬಳ್ಳಾರಿ: ಶಾಸಕ ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ವಿರುದ್ಧ ಎಫ್ ಐ ಆರ್ ದಾಖಲು
ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ
Published On :

ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ವಿರುದ್ದ ಎಫ್ ಐಆರ್ ದಾಖಲು ಮಾಡಲಾಗಿದೆ. ಬಳ್ಳಾರಿ ನಗರದ ಗಾಂಧಿನಗರ ಪೊಲೀಸ್ ಠಾಣೆಯಲ್ಲಿಎಫ್ ಐಆರ್ ದಾಖಲಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅರುಣಾ ಲಕ್ಷ್ಮೀ ಅವರು ಕೆ ಆರ್​ ಪಿ ಪಿ ಪಕ್ಷದಿಂದ ಬಳ್ಳಾರಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಸೋಲುಂಡಿದ್ದರು. ಆದರೆ ವಿಧಾನಸಭಾ ಚುನಾವಣೆಯ ಅಫಿಡವಿಟ್ ನಲ್ಲಿ ತಪ್ಪು ಮಾಹಿತಿ ನೀಡಿದ ಆರೋಪ ಅವರ ವಿರುದ್ಧ ಕೇಳಿ ಬಂದಿತ್ತು. ಶ್ರೀನಿವಾಸ್ ರಂಗರೆಡ್ಡಿ ನೀಡಿದ ದೂರಿನ ಮೇರೆಗೆ ಎಫ್ ಐ ಆರ್ ಮಾಡಲಾಗಿದೆ.

ಜನವರಿ 8ರಂದು ಬಳ್ಳಾರಿಯ ಗಾಂಧಿ ನಗರ ಠಾಣೆಯಲ್ಲಿ ರಂಗರೆಡ್ಡಿ ಎಂಬವರು ದೂರು ದಾಖಲು ಮಾಡಿದ್ದು, ಆ ಬಳಿಕ ತನಿಖೆಗೆ ಅನುಮತಿ ನೀಡುವಂತೆ ಪೊಲೀಸರು ಜಿಲ್ಲಾ ಮ್ಯಾಜಿಸ್ಟ್ರೇಟ್​​ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು.

ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಕೂಡಲೇ ತನಿಖೆ ಆರಂಭಿಸುವಂತೆ ಆದೇಶ ನೀಡಿದೆ. ನ್ಯಾಯಾಲಯದ ಆದೇಶದ ಮೇರೆಗೆ ಮಾರ್ಚ್​​07 ರಂದು ಪೊಲೀಸರು ಪ್ರಜಾ ಪ್ರತಿನಿಧಿ ಕಾಯ್ದೆ-1951, 1988 ಸೆಕ್ಷನ್ 125 (a) ಅನ್ವಯ ಎಫ್​ಐಆರ್ ದಾಖಲು ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.