ರಾಜ್ಯ

ತಮಿಳುನಾಡಿಗೆ ಕಳ್ಳತನದಿಂದ ಕಾವೇರಿ ನೀರು: ವಿಡಿಯೋ ಹಂಚಿಕೊಂಡು ಬಿಜೆಪಿ ಟೀಕೆ

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ಕಳ್ಳತನದಿಂದ ಕಾವೇರಿ ನೀರು ಹರಿಸುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಕಿಡಿಕಾರಿದೆ.

ತಮಿಳುನಾಡಿಗೆ ಕಳ್ಳತನದಿಂದ ಕಾವೇರಿ ನೀರು: ವಿಡಿಯೋ ಹಂಚಿಕೊಂಡು ಬಿಜೆಪಿ ಟೀಕೆ
ಕಾವೇರಿ ನೀರು
Published On :

ಬೆಂಗಳೂರು: ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ಕಳ್ಳತನದಿಂದ ಕಾವೇರಿ ನೀರು ಹರಿಸುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ಬಿಜೆಪಿ, ಬೆಂಗಳೂರಿನಲ್ಲಿ ಕುಡಿಯುವ ಹನಿ ನೀರು ಕೂಡಾ ಸಿಗುತ್ತಿಲ್ಲ. ಆದರೆ ನಾಡದ್ರೋಹಿ ಕಾಂಗ್ರೆಸ್ ತಮಿಳುನಾಡಿಗೆ ಮಾತ್ರ ಕಳ್ಳತನದಿಂದ ಕಾವೇರಿ ನೀರು ಹರಿಸುತ್ತಿದೆ ಎಂದು ಟೀಕಿಸಿದೆ.

ತಮಿಳುನಾಡಿನ ಮೆಟ್ಟೂರು ಜಲಾಶಯ ತುಂಬಿ ತುಳುಕುತ್ತಿದ್ದರೂ, ಬೆಂಗಳೂರಿನಲ್ಲಿ ಟ್ಯಾಂಕರ್ ಮಾಫಿಯಾವನ್ನು ಯಶಸ್ವಿಗೊಳಿಸಲು ಇರುವ ಕಾವೇರಿಯ ಒಡಲನ್ನು ಬಗೆಯುತ್ತಿದೆ ನಾಡ ದ್ರೋಹಿ ಕಾಂಗ್ರೆಸ್. ಮಜಾವಾದಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರೇ ಇದೇನಾ ನೀವು ಕನ್ನಡಿಗರಿಗೆ ಕೊಡುತ್ತಿರುವ ನಾಡ ದ್ರೋಹದ ಗ್ಯಾರಂಟಿ ಎಂದು ಪ್ರಶ್ನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.