ಪಾಕ್ ಪರ ಘೋಷಣೆ ಕೂಗುವವರ ಗುಂಡಿಕ್ಕಿ ಕೊಲ್ಲಬೇಕು: ಸಚಿವ ರಾಜಣ್ಣ
ಪಾಕಿಸ್ತಾನದ ಪರ ಘೋಷಣೆ ಕೂಗುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಹೋದ್ಯೋಗಿ ಕೆ.ಎನ್.ರಾಜಣ್ಣ ಅವರು ಶನಿವಾರ ಹೇಳಿದರು.

ತುಮಕೂರು: ಪಾಕಿಸ್ತಾನದ ಪರ ಘೋಷಣೆ ಕೂಗುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಹೋದ್ಯೋಗಿ ಕೆ.ಎನ್.ರಾಜಣ್ಣ ಅವರು ಶನಿವಾರ ಹೇಳಿದರು.
ಇತ್ತೀಚೆಗೆ ವಿಧಾನಸೌಧದಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಕಾಂಗ್ರೆಸ್‌ನ ಸೈಯದ್ ನಸೀರ್ ಹುಸೇನ್ ಬೆಂಬಲಿಗರಿಂದ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಸಹಕಾರ ಸಚಿವ ರಾಜಣ್ಣ ಉತ್ತರಿಸಿದರು.
ಸಮಾಜ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿ ಕಾನೂನು ಸುವ್ಯವಸ್ಥೆ ಜಾರಿಯಾಗಬೇಕು ಎಂದು ಸಲಹೆ ನೀಡಿದರು. ಉತ್ತರ ಪ್ರದೇಶದಲ್ಲಿ ಗಲಭೆ ಪ್ರಕರಣಗಳಲ್ಲಿ ಆರೋಪಿಗಳ ಮನೆಗಳು ಮತ್ತು ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ, ಆದರೆ, ಹಾಗೆ ಮಾಡಲು ಕಾನೂನು ಅನುಮತಿ ಇಲ್ಲ. ಆದರೆ, ಕಾಯ್ದೆಯು ಯುಪಿಯಲ್ಲಿ ಗಲಭೆ ಮತ್ತು ಇತರ ಸಮಾಜ ವಿರೋಧಿ ಚಟುವಟಿಕೆಗಳನ್ನು ತಡೆಯಲು ಸಹಾಯ ಮಾಡಿದೆ ಎಂದು ಹೇಳಿದರು.
ಇದೇ ವೇಳೆ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಘಟನೆಯಿಂದ ಕಾಂಗ್ರೆಸ್ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗುವುದಿಲ್ಲ ಎಂದು ಸಮರ್ಥಿಸಿಕೊಂಡರು
ಸಮಾಜ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕರ್ನಾಟಕ ಪೊಲೀಸರು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಾರೆಂಬ ವಿಶ್ವಾಸವಿದೆ. ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಸಮಾಜದಲ್ಲಿ ಶಾಂತಿ ನೆಲೆಸಬೇಕು. ಒಂದು ವೇಳೆ ಇಲ್ಲಿ ತೊಂದರೆಯಾದರೆ ಇದು ರಾಜ್ಯದ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತದೆ ಎಂದರು.
ಬಳಿಕ ಚುನಾವಣೆ ಕುರಿತು ಮಾತಾಡಿ ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇತ್ತೀಚೆಗೆ ಭವಿಷ್ಯ ನುಡಿದಿದ್ದರೂ, ಪಕ್ಷವು ಸುಮಾರು 16 ಸ್ಥಾನಗಳನ್ನು ಗೆಲ್ಲಬಹುದು ಎಂದು ರಾಜಣ್ಣ ಹೇಳಿದರು.
ನಂತರ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಸಂಸದ ದಿವಂಗತ ಜಿ ಪುಟ್ಟಸ್ವಾಮಿಗೌಡ ಅವರ ಮೊಮ್ಮಗರಾಗಿರುವ ಶ್ರೇಯಸ್‌ಗೆ ಜಿಲ್ಲೆಯ ಎಲ್ಲ ಸಮುದಾಯಗಳ ಬೆಂಬಲವಿದೆ. ತುಮಕೂರಿನಲ್ಲಿ ಎಸ್‌ಪಿ ಮುದ್ದಹನುಮೇಗೌಡ ಗೆಲ್ಲುತ್ತಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



