ರಾಜ್ಯ

ಬೆಂಗಳೂರು: 'ಜೈ ಅಲ್ಲು ಅರ್ಜುನ್' ಹೇಳುವಂತೆ ಒತ್ತಾಯಿಸಿ ಪ್ರಭಾಸ್ ಅಭಿಮಾನಿಗೆ ಥಳಿತ, ವಿಡಿಯೋ ವೈರಲ್!

ಬೆಂಗಳೂರಿನಲ್ಲಿ ಟಾಲಿವುಡ್ ನಟರ ಅಭಿಮಾನಿಗಳ ನಡುವೆ ಮಾರಾಮಾರಿ ನಡೆದಿದ್ದು ಪ್ರಭಾಸ್ ಹಾಗೂ ಅಲ್ಲು ಅರ್ಜುನ್ ಅಭಿಮಾನಿಗಳು ಕೈ-ಕೈ ಮಿಲಾಯಿಸಿದ್ದಾರೆ.

ಬೆಂಗಳೂರು: 'ಜೈ ಅಲ್ಲು ಅರ್ಜುನ್' ಹೇಳುವಂತೆ ಒತ್ತಾಯಿಸಿ ಪ್ರಭಾಸ್ ಅಭಿಮಾನಿಗೆ ಥಳಿತ, ವಿಡಿಯೋ ವೈರಲ್!
ಅಭಿಮಾನಿಗಳ ಹೊಡೆದಾಟ
Published On :

ಬೆಂಗಳೂರು: ಬೆಂಗಳೂರಿನಲ್ಲಿ ಟಾಲಿವುಡ್ ನಟರ ಅಭಿಮಾನಿಗಳ ನಡುವೆ ಮಾರಾಮಾರಿ ನಡೆದಿದ್ದು ಪ್ರಭಾಸ್ ಹಾಗೂ ಅಲ್ಲು ಅರ್ಜುನ್ ಅಭಿಮಾನಿಗಳು ಕೈ-ಕೈ ಮಿಲಾಯಿಸಿದ್ದಾರೆ.

ಕ್ರಿಕೆಟ್ ಆಡುವ ವೇಳೆ ಇಬ್ಬರು ನಟರ ಅಭಿಮಾನಿಗಳ ನಡುವೆ ಮಾತಿಗೆ ಮಾತು ಬೆಳೆದು ಬಡಿದಾಡಿಕೊಂಡಿದ್ದು ಈ ವಿಡಿಯೊ ವೈರಲ್ ಆಗುತ್ತಿದೆ. ಪ್ರಭಾಸ್ ಅಭಿಮಾನಿಯೊಬ್ಬನನ್ನು ಕೆಲ ಅಲ್ಲು ಅರ್ಜುನ್ ಅಭಿಮಾನಿಗಳು ಸೇರಿ ಥಳಿಸಿದ್ದಾರೆ.

ಅಲ್ಲು ಅರ್ಜುನ್ ಅಭಿಮಾನಿಗಳು ಜೈ ಅಲ್ಲು ಅರ್ಜುನ್ ಎಂದು ಹೇಳು ಹೇಳು ಎಂದು ಬಲವಂತ ಮಾಡಿ ಹಲ್ಲೆ ನಡೆಸಿದ್ದಾರೆ. ಸದ್ಯ ಈ ಘಟನೆ ಪೊಲೀಸರು ಠಾಣೆ ಮೆಟ್ಟಿಲೇರಿದೆ.

ಪ್ಯಾನ್ ಇಂಡಿಯಾ ನಟ ಪ್ರಭಾಸ್ ಕಲ್ಕಿ 2898 ಎಡಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇನ್ನು ಅಲ್ಲು ಅರ್ಜುನ್ ಪುಷ್ಪ 2 ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.