ಬ್ಯಾಡಗಿ ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತ: ಆಕ್ರೋಶಗೊಂಡ ರೈತರಿಂದ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ
ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತವಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ಪಟ್ಟಣದ ಎಪಿಎಂಸಿ ಕಚೇರಿಗೆ ನುಗ್ಗಿ ಪೀಠೋಪಕರ ಧ್ವಂಸಗೊಳಿಸಿ, ಕಲ್ಲುತೂರಾಟ ನಡೆಸಿದ್ದಾರೆ.

ಹಾವೇರಿ: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಒಣ ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತವಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ಪಟ್ಟಣದ ಎಪಿಎಂಸಿ ಕಚೇರಿಗೆ ನುಗ್ಗಿ ಪೀಠೋಪಕರ ಧ್ವಂಸಗೊಳಿಸಿ, ಕಲ್ಲುತೂರಾಟ ನಡೆಸಿ ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ಸೋಮವಾರ ಸಂಜೆ ನಡೆದಿದೆ.
ಮೆಣಸಿನಕಾಯಿ ಬೆಲೆ ದಿಢೀರ್ ಇಳಿಕೆಯಾಗಿದ್ದರಿಂದ ರೊಚ್ಚಿಗೆದ್ದ ರೈತರು ಎಪಿಎಂಸಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಕಚೇರಿಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ನಂತರ ಆವರಣದಲ್ಲಿ ನಿಂತಿದ್ದ ಎಪಿಎಂಸಿ ಅಧ್ಯಕ್ಷರ ಕಾರಿನ ಮೇಲೂ ಕಲ್ಲು ತೂರಿದ್ದಾರೆ. ಅಲ್ಲದೆ ಹಲವು ವಾಹನಗಳಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದುವರೆಗೆ 12 ವಾಹನಗಳನ್ನು ರೈತರು ಸುಟ್ಟು ಹಾಕಿದ್ದಾರೆ. 1 ಅಗ್ನಿಶಾಮಕ ವಾಹನ ಸಹ ಬೆಂಕಿಗೆ ಆಹುತಿ ಆಗಿದೆ. ಒಟ್ಟು 3 ಅಗ್ನಿಶಾಮಕ ವಾಹನ ಸ್ಥಳದಲ್ಲಿ ಇವೆ.
ರೈತರು ಮೆಣಸಿನಕಾಯಿಗೂ ಬೆಂಕಿ ಹಚ್ಚಿ ಗಲಾಟೆ ಮಾಡಿದ್ದಾರೆ. ಮಾರ್ಕೆಟ್ನಲ್ಲಿ ದಟ್ಟಹೊಗೆಯಿಂದ ಸಾರ್ವಜನಿಕರ ಉಸಿರಾಟಕ್ಕೆ ಸಮಸ್ಯೆ ಉಂಟಾಗಿದೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದು ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಮಾರುಕಟ್ಟೆಯನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ.
ಕಳೆದ ವಾರ ಪ್ರತಿ ಕ್ವಿಂಟಾಲ್ ಮೆಣಸಿನಕಾಯಿ ಬೆಲೆ 20 ಸಾವಿರ ರೂ. ಇತ್ತು. ಈಗ ಕ್ವಿಂಟಾಲ್ ಮೆಣಸಿನಕಾಯಿ ಬೆಲೆ 12 ಸಾವಿರ ರೂಪಾಯಿಗೆ ಕುಸಿದ ಹಿನ್ನೆಲೆಯಲ್ಲಿ ಬ್ಯಾಡಗಿ ಎಪಿಎಂಸಿ ಕಚೇರಿಯಲ್ಲಿದ್ದ ಪೀಠೋಪಕರಣ ಧ್ವಂಸ ಮಾಡಿ ರೈತರು ಆಕ್ರೋಶ ಹೊರಹಾಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



