ರಾಜ್ಯದಲ್ಲಿ 600 ಇಂದಿರಾ ಕ್ಯಾಂಟೀನ್ ತೆರೆಯುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ
ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದಾದ್ಯಂತ ಕನಿಷ್ಠ 600 ಇಂದಿರಾ ಕ್ಯಾಂಟೀನ್ಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಘೋಷಿಸಿದ್ದಾರೆ.

ಬೆಂಗಳೂರು: ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದಾದ್ಯಂತ ಕನಿಷ್ಠ 600 ಇಂದಿರಾ ಕ್ಯಾಂಟೀನ್ಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಘೋಷಿಸಿದ್ದಾರೆ.
ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ''ಇಂದಿರಾ ಕ್ಯಾಂಟೀನ್ನಲ್ಲಿ ಎಲ್ಲರಿಗೂ 5 ರೂ.ಗೆ ಬೆಳಗಿನ ಉಪಾಹಾರ ಮತ್ತು 10 ರೂ.ಗೆ ಊಟ ನೀಡಲಾಗುವುದು ಎಂದರು.
“ನಾವು ಬೆಂಗಳೂರಿನಲ್ಲಿ ಒಟ್ಟು 188 ಹೊಸ ಇಂದಿರಾ ಕ್ಯಾಂಟೀನ್ಗಳನ್ನು ಪ್ರಾರಂಭಿಸುತ್ತಿದ್ದೇವೆ. ವಿಮಾನ ನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆ ಇತ್ತು. ಹೀಗಾಗಿ ಇಲ್ಲಿ ಎರಡು ಕ್ಯಾಂಟೀನ್ ಆರಂಭಿಸಲಾಗುತ್ತಿದೆ. ಬೆಂಗಳೂರಿನಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್ ಗಳ ಪೈಕಿ ಈಗಾಗಲೇ 40 ಪೂರ್ಣಗೊಂಡಿದ್ದು, ಉಳಿದವು ಪ್ರಗತಿಯಲ್ಲಿವೆ ಎಂದು ಸಿಎಂ ತಿಳಿಸಿದರು.
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಅಗತ್ಯವಿದೆ. ಈಗಾಗಲೇ ಒಂದು ಉದ್ಘಾಟನೆಗೊಂಡಿದ್ದು, ಇನ್ನೊಂದು ಇಂದಿರಾ ಕ್ಯಾಂಟೀನ್ ಶೀಘ್ರದಲ್ಲೇ ಬರಲಿದೆ. ಬಡವರಿಗೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರ ನೀಡುವುದು ಇದರ ಉದ್ದೇಶವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಆಹಾರದ ಮೆನು ಕೂಡ ಬದಲಾವಣೆ ಮಾಡಲಾಗಿದ್ದು, ಊಟದ ಹಾಲ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಬೆಂಗಳೂರಿನ ಪ್ರತಿ ವಾರ್ಡ್ಗಳಲ್ಲಿ ಹಾಗೂ ರಾಜ್ಯದ ಇತರ ಭಾಗಗಳಲ್ಲಿಯೂ ಇಂದಿರಾ ಕ್ಯಾಂಟೀನ್ಗಳನ್ನು ಆರಂಭಿಸಲಾಗುವುದು. ಹಿಂದಿನ ಸರ್ಕಾರ ಊಟ ನೀಡದೆ ಕೆಲವನ್ನು ಮುಚ್ಚಲಾಗಿದೆ. ಬಡವರು ಹೊಟ್ಟೆ ತುಂಬ ಊಟ ಮಾಡಬೇಕು ಎಂಬ ಕಾರಣಕ್ಕೆ ನಾವು ಈ ಕಾರ್ಯಕ್ರಮವನ್ನು ಪುನರಾರಂಭಿಸಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



