ಗೋಬಿ ಮಂಚೂರಿ, ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ರಾಜ್ಯದಲ್ಲಿ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಗೋಬಿ ಮಂಚೂರಿ ಹಾಗು ಕಾಟನ್ ಕ್ಯಾಂಡಿಗಳಲ್ಲಿ ಕಳಪೆ ಗುಣಮಟ್ಟ ಹಾಗು ಕೃತಕ ಬಣ್ಣಗಳ ಬಳಕೆಯಾಗುತ್ತಿದ್ದಿದ್ದು ಕಂಡು ಬಂದಿದ್ದು ಈ ಹಿನ್ನೆಲೆಯಲ್ಲಿ ರೋಡಮೈನ್-ಬಿ ಸೇರಿದಂತೆ ಕೃತಕ ಬಣ್ಣಗಳ ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನುಮುಂದೆ ನಿಷೇಧಿತ ಈ ಕೃತಕ ಬಣ್ಣಗಳ ಬಳಕೆ ಮಾಡುವವರಿಗೆ 7 ವರ್ಷಗಳವರೆಗೆ ಜೈಲು ಹಾಗು 10 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ. ಸಾರ್ವಜನಿಕರ ಆರೋಗ್ಯ ಹಿತರಕ್ಷಣೆಯ ದೃಷ್ಟಿಯಿಂದ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


