ಬಾಗಲಕೋಟೆ: ಪ್ರೇಯಸಿ ಭೇಟಿಗೆ ನಿರಾಕರಿಸಿದ್ದಕ್ಕೆ ಕೋಪಗೊಂಡು ಆಕೆಯ ತಂದೆಯನ್ನು ಕೊಂದ ಯುವಕ
ತನ್ನನ್ನು ಪ್ರೇಯಸಿಯಿಂದ ಬೇರ್ಪಡಿಸಿದ್ದಕ್ಕೆ ಕೋಪಗೊಂಡ ಯುವಕನೊಬ್ಬ ತನ್ನ ಗೆಳತಿಯ ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯ ಭಗವತಿ ಗ್ರಾಮದಲ್ಲಿ ಮಂಗಳವಾರ ವರದಿಯಾಗಿದೆ.

ಬಾಗಲಕೋಟೆ: ತನ್ನನ್ನು ಪ್ರೇಯಸಿಯಿಂದ ಬೇರ್ಪಡಿಸಿದ್ದಕ್ಕೆ ಕೋಪಗೊಂಡ ಯುವಕನೊಬ್ಬ ತನ್ನ ಗೆಳತಿಯ ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯ ಭಗವತಿ ಗ್ರಾಮದಲ್ಲಿ ಮಂಗಳವಾರ ವರದಿಯಾಗಿದೆ.
ದಲಿತ ಯುವಕ ಪ್ರವೀಣ ಕಾಂಬಳೆ ಎಂಬಾತ ಮೇಲ್ಜಾತಿಗೆ ಸೇರಿದ 52 ವರ್ಷದ ಸಂಗನಗೌಡ ಪಾಟೀಲರ ಪುತ್ರಿಯೊಂದಿಗೆ ಸಂಬಂಧ ಹೊಂದಿದ್ದರು.
ಆದರೆ, ಸಂಗನಗೌಡ ಪಾಟೀಲ ಅವರು ಇವರಿಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದರು. ತನ್ನ ಮಗಳಿಂದ ದೂರ ಉಳಿಯುವಂತೆ ಪ್ರವೀಣ ಕಾಂಬಳೆಗೆ ತಾಕೀತು ಮಾಡಿದ್ದರು.
ಆ ಘಟನೆ ನಂತರ ತನ್ನ ತಂದೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಯುವತಿ ಯುವಕನನ್ನು ಭೇಟಿಯಾಗಲು ನಿರಾಕರಿಸಿದ್ದಳು. ನಂತರ ಕುಪಿತಗೊಂಡ ಆರೋಪಿ ಸಂಗನಗೌಡ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಮಗಳನ್ನು ಭೇಟಿಯಾಗಲು ಯತ್ನಿಸಿದ್ದಕ್ಕೆ ಕುಪಿತಗೊಂಡ ಸಂಗನಗೌಡ ಪಾಟೀಲ, ಪ್ರವೀಣ ಕಾಂಬಳೆಗೆ ಥಳಿಸಿದ್ದರು.
ಬಾಗಲಕೋಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




