ರಾಜ್ಯ

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 3.75ರಷ್ಟು ಹೆಚ್ಚಳ

ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆ(ಡಿಎ)ಯನ್ನು ಶೇ. 3.75ರಷ್ಟು ಹೆಚ್ಚಳ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 3.75ರಷ್ಟು ಹೆಚ್ಚಳ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆ(ಡಿಎ)ಯನ್ನು ಶೇ. 3.75ರಷ್ಟು ಹೆಚ್ಚಳ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ಲೋಕಸಭೆ ಚುನಾವಣೆ ಅಧಿಸೂಚನೆ ಹೊರಡಿಸುವ ಮೊದಲೇ ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ. 38.75 ರಿಂದ ಶೇ. 42.5ಕ್ಕೆ ಹೆಚ್ಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ದಿನಾಂಕ 01/01/2024ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.

ಇನ್ನು, ಕೇಂದ್ರ ವೇತನ ನೀತಿಯಂತೆ ವೇತನ ಪಡೆಯುವ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.4ರಷ್ಟು ಏರಿಸಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಪ್ರತಿ ವರ್ಷ 1792.71 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ ಎಂದು ಹೇಳಲಾಗಿದೆ.

State govt employees DA Kan GO.pdf

ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರದ ಮುಂದೆ ಶೇ.4ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರವು ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿ, ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಆದೇಶ ಹೊರಡಿಸಿತ್ತು. ಅದೇ ರೀತಿ ಕರ್ನಾಟಕದಲ್ಲೂ ತುಟ್ಟಿ ಭತ್ಯೆಯನ್ನು ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಶೇ. 4 ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ನೌಕರರ ಸಂಘ ಪತ್ರ ಬರೆದು ಮನವಿ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.