ರಾಜ್ಯ

5, 8 ಮತ್ತು 9ನೇ ತರಗತಿಗೆ ಬೋರ್ಡ್​ ಪರೀಕ್ಷೆಗೆ ಸುಪ್ರೀಂ ತಡೆ, ಎಕ್ಸಾಂ ಮುಂದೂಡಿದ ಶಿಕ್ಷಣ ಇಲಾಖೆ

5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದ್ದು, ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಮುಂದೂಡಿದೆ.

5, 8 ಮತ್ತು  9ನೇ ತರಗತಿಗೆ ಬೋರ್ಡ್​ ಪರೀಕ್ಷೆಗೆ ಸುಪ್ರೀಂ ತಡೆ, ಎಕ್ಸಾಂ ಮುಂದೂಡಿದ ಶಿಕ್ಷಣ ಇಲಾಖೆ
ಸುಪ್ರೀಂ ಕೋರ್ಟ್
Published On :

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಈಗಾಗಲೇ ಆರಂಭವಾಗಿರುವ 5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದ್ದು, ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಮುಂದೂಡಿದೆ.

5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ಹೈಕೋರ್ಟ್‌ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪರೀಕ್ಷೆಗಳನ್ನು ನಡೆಸದಂತೆ ತಡೆ ನೀಡಿದೆ.

ಸುಪ್ರೀಂ ಕೋರ್ಟ್ ತಡೆ ನೀಡಿರುವ ಹಿನ್ನೆಲೆಯಲ್ಲಿ 5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಶಿಕ್ಷಣ ಇಲಾಖೆ ಮುಂದೂಡಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿಬಿ ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಹೈಕೋರ್ಟ್‌ ಏಕ ಸದಸ್ಯ ಪೀಠ ಮಾರ್ಚ್ 6 ರಂದು ಬೋರ್ಡ್ ಪರೀಕ್ಷೆಗಳನ್ನು ನಡೆಸುವ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು.

ರಾಜ್ಯಾದ್ಯಂತ 45,000 ಶಾಲೆಗಳ 28 ಲಕ್ಷ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆ ಬರೆಯುತ್ತಿದ್ದು, ಅವರ ಭವಿಷ್ಯ ಈಗ ಅತಂತ್ರವಾಗಿದೆ. ಇನ್ನು 11 ತರಗತಿ ಪರೀಕ್ಷೆಗಳು ಈಗಾಗಲೇ ಫೆಬ್ರವರಿ 28 ರಂದೇ ಮುಕ್ತಾಯಗೊಂಡಿವೆ. 5, 8 ಮತ್ತು 9ನೇ ತರಗತಿಗೆ ಮಾರ್ಚ್ 11 ರಿಂದ ಪರೀಕ್ಷೆಗಳು ಆರಂಭವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.