ಮೈಸೂರಿನಲ್ಲಿ ಮರ್ಯಾದಾ ಹತ್ಯೆ: ಯುವಕನಿಗೆ ಚೂರಿ ಇರಿತ, ಸ್ಥಿತಿ ಗಂಭೀರ
ತಮ್ಮ ಇಚ್ಛೆಗೆ ವಿರುದ್ಧವಾಗಿ ಪುತ್ರಿಯ ವಿವಾಹವಾಗಿದ್ದ ಯುವಕನಿಗೆ ಯುವತಿಯ ಪೋಷಕರು ಹಾಗೂ ಸಂಬಂಧಿಕರು ದೈಹಿಕ ಹಲ್ಲೆ ನಡೆಸಿ, ಚಾಕುವಿನಿಂದ ಇರಿದಿರುವ ಘಟನೆಯೊಂದು ಶ್ರೀರಂಗಪಟ್ಟಣದ ಮೇಳಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಮೈಸೂರು: ತಮ್ಮ ಇಚ್ಛೆಗೆ ವಿರುದ್ಧವಾಗಿ ಪುತ್ರಿಯ ವಿವಾಹವಾಗಿದ್ದ ಯುವಕನಿಗೆ ಯುವತಿಯ ಪೋಷಕರು ಹಾಗೂ ಸಂಬಂಧಿಕರು ದೈಹಿಕ ಹಲ್ಲೆ ನಡೆಸಿ, ಚಾಕುವಿನಿಂದ ಇರಿದಿರುವ ಘಟನೆಯೊಂದು ಶ್ರೀರಂಗಪಟ್ಟಣದ ಮೇಳಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಮೈಸೂರು ತಾಲ್ಲೂಕು ಕುರುಬಾರಹಳ್ಳಿಯ ಮಂಜುನಾಥ್ ಅವರ ಮಗ ಶಶಾಂಕ್ ಮೇಲೆ ಮೈಸೂರಿನ ಜೆ.ಪಿ. ನಗರದ ಆನಂದ್ ಮತ್ತು ಇತರರ ತಂಡ ಚೂರಿಯಿಂದ ಇರಿದಿದೆ.
ಘಟನೆಯಲ್ಲಿ ಶಶಾಂಕ್‌ನ ಕರುಳು ಹೊರ ಬಂದಿದ್ದು ಆತನ ಸ್ಥಿತಿ ಗಂಭೀರವಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಡಿವಾಳ ಜಾತಿಯ ಶಶಾಂಕ್ ಮತ್ತು ಕುರುಬ ಜಾತಿಯ 19 ವರ್ಷದ ಯುವತಿ ಪರಸ್ಪರ ಪ್ರೀತಿಸಿ 5 ದಿನದ ಹಿಂದಷ್ಟೇ ಮದುವೆಯಾಗಿದ್ದರು. ಯುವತಿಗೆ ಬೇರೊಬ್ಬ ಯುವಕನ ಜತೆ ಮದುವೆ ನಿಶ್ಚಯವಾಗಿತ್ತು. ವಿಚಾರ ತಿಳಿದ ಶಶಾಂಕ್ ಯುವತಿ ತನ್ನೊಂದಿಗೆ ಕರೆದುಕೊಂಡು ಹೋಗಿ ದೇವಸ್ಥಾನದಲ್ಲಿ ವಿವಾಹ ಮಾಡಿಕೊಂಡಿದ್ದ.
ದಂಪತಿ ಮೇಳಾಪುರ ಗ್ರಾಮದಲ್ಲಿ ವಾಸವಾಗಿರುವ ವಿಚಾರ ತಿಳಿದ ಅನುಷ್ಕಾ ಪೋಷಕರು ಹಾಗೂ ಸಂಬಂಧಿಕರು ಮನೆಗೆ ನುಗ್ಗಿ ಶಶಾಂಕ್ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಆತನ ಹೊಟ್ಟೆ ಹಾಗೂ ಇತರೆ ಭಾಗಗಳಿಗೆ ಚೂರಿಯಿಂದ ಇರಿದ್ದಾರೆ. ಘಟನೆ ಸಂಬಂಧ ಯುವತಿ ಅನುಷ್ಕಾ ತಂದೆ ಆನಂದ್ ಸೇರಿ 13 ಮಂದಿ ವಿರುದ್ಧ ದೂರು ದಾಖಲಿಸಿದ್ದು, ದೂರು ಆಧರಿಸಿ 8 ಮಂದಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಶ್ರೀರಂಗಪಟ್ಟಣ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



