ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ಖರೀದಿಸಿದ್ದ ಹೊಸ ಕಾರು ಅಪಘಾತ!
ಕನ್ನಡ ಬಿಗ್ ಬಾಸ್ 10ನೇ ಆವೃತ್ತಿಯ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ತುಕಾಲಿ ಸಂತೋಷ್ ಅವರ ಹೊಸ ಕಾರು ಅಪಘಾತಕ್ಕೀಡಾಗಿದೆ.

ಕನ್ನಡ ಬಿಗ್ ಬಾಸ್ 10ನೇ ಆವೃತ್ತಿಯ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ತುಕಾಲಿ ಸಂತೋಷ್ ಅವರ ಹೊಸ ಕಾರು ಅಪಘಾತಕ್ಕೀಡಾಗಿದೆ.
ತುಕಾಲಿ ಸಂತೋಷ್ ಕೆಲ ದಿನಗಳ ಹಿಂದೆ ಕಿಯಾ ಕಂಪನಿಯ ಹೊಸ ಕಾರು ಖರೀದಿಸಿದ್ದರು. ಆದರೆ ಅವರ ಕಾರಿಗೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಆಟೋ ರಿಕ್ಷಾ ಡಿಕ್ಕಿ ಹೊಡೆದಿದ್ದು ಕಾರೂ ಹಾಗೂ ಆಟೋ ಜಖಂಗೊಂಡಿದೆ.
ಅಪಘಾತದಲ್ಲಿ ಯಾವುದೇ ಪ್ರಾಯಾಪಾಯ ಸಂಭವಿಸಿಲ್ಲ. ಆದರೆ ಆಟೋ ಚಾಲಕ ಜಗದೀಶ್ ಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತುಕಾಲಿ ಸಂತೋಷ್ ಅವರ ಕಾರು ಅಪಘಾತದ ಫೋಟೋಗಳು ಲಭ್ಯವಾಗಿವೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



