ರಾಜ್ಯ

ಜಿಎಂ ಸಿದ್ದೇಶ್ವರ್​ ಪತ್ನಿಗೆ ಬಿಜೆಪಿ ಟಿಕೆಟ್​ ನೀಡಿದ್ದಕ್ಕೆ ಆಕ್ರೋಶ: ಪೆಟ್ರೋಲ್​ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ

ದಾವಣಗೆರೆ ಹಾಲಿ ಸಂಸದ ಜಿಎಂ ಸಿದ್ದೇಶ್ವರ್ ಅವರ ಬದಲಿಗೆ ಅವರ ಪತ್ನಿ ಗಾಯತ್ರಿ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಲಾಗಿದೆ.

ಜಿಎಂ ಸಿದ್ದೇಶ್ವರ್​ ಪತ್ನಿಗೆ ಬಿಜೆಪಿ ಟಿಕೆಟ್​ ನೀಡಿದ್ದಕ್ಕೆ ಆಕ್ರೋಶ: ಪೆಟ್ರೋಲ್​ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ
ಯುವಕ ಆತ್ಮಹತ್ಯೆಗೆ ಯತ್ನ
Published On :

ದಾವಣಗೆರೆ: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬುಧವಾರ ಬಿಡುಗಡೆ ಮಾಡಿದ್ದು, ಹಲವು ಹಾಲಿ ಸಂಸದರಿಗೆ ಟಿಕೆಟ್​ ನಿರಾಕರಿಸಲಾಗಿದೆ. ಅದರಂತೆ ದಾವಣಗೆರೆ ಹಾಲಿ ಸಂಸದ ಜಿಎಂ ಸಿದ್ದೇಶ್ವರ್ ಅವರ ಬದಲಿಗೆ ಅವರ ಪತ್ನಿ ಗಾಯತ್ರಿ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಲಾಗಿದೆ.

ಈ ಬಾರಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್​ ಅವರು ಸಹ ಬಿಜೆಪಿ ಟಿಕೆಟ್​ ಆಕಾಂಕ್ಷಿ ಆಗಿದ್ದರು. ಆದರೆ ಅವರಿಗೆ ಟಿಕೆಟ್ ನಿರಾಕರಿಸಿ ಸಿದ್ದೇಶ್ವರ್ ಅವರ ಪತ್ನಿಗೆ ಟಿಕೆಟ್ ನೀಡಿದ್ದಕ್ಕೆ ಆಕ್ರೋಶಗೊಂಡ ಅವರ ಬೆಂಬಲಿಗನೊಬ್ಬ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ನಡೆದಿದೆ.

ಇಂದು ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿಯಲ್ಲಿರುವ ಎಸ್.ಎ.ರವೀಂದ್ರನಾಥ್​ ನಿವಾಸದ ಬಳಿಯೇ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಇನ್ನು ಸಿದ್ದರೇಶ್ವರ್ ಅವರ ಪತ್ನಿಗೆ ದಾವಣಗೆರೆ ಟಿಕೆಟ್​ ನೀಡಿದ್ದಕ್ಕೆ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶ ಇಲ್ಲ. ಸರ್ವೆಯಲ್ಲಿಯೂ ಕೂಡ ಸಂಸದ ಸಿದ್ದೇಶ್ವರ ಕುಟುಂಬದ ಹೆಸರಿಲ್ಲ. ಸರ್ವೆ ಸಂಪೂರ್ಣ ಸಂಸದ ಸಿದ್ದೇಶ್ವರ್​ ವಿರುದ್ಧ ಬಂದಿದೆ. ಗೂಂಡಾಗಳನ್ನ ಇಟ್ಕೊಂಡು ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.