ರಾಜ್ಯ

ನನ್ನ ವಿರುದ್ಧದ ಆರೋಪ ನಿರಾಧಾರ, ಕಾನೂನು ಹೋರಾಟಕ್ಕೆ ಸಿದ್ಧ: ಬಿಎಸ್‌ ಯಡಿಯೂರಪ್ಪ

ನನ್ನ ಮೇಲೆ ಮಹಿಳೆಯೊಬ್ಬರು ದೂರು ಕೊಟ್ಟಿದ್ದು, ಈ ಅರೋಪ ನಿರಾಧಾರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ನನ್ನ ವಿರುದ್ಧದ ಆರೋಪ ನಿರಾಧಾರ, ಕಾನೂನು ಹೋರಾಟಕ್ಕೆ ಸಿದ್ಧ: ಬಿಎಸ್‌ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ(ಸಂಗ್ರಹ ಚಿತ್ರ)
Published On :

ಬೆಂಗಳೂರು: ನನ್ನ ಮೇಲೆ ಮಹಿಳೆಯೊಬ್ಬರು ದೂರು ಕೊಟ್ಟಿದ್ದು, ಈ ಅರೋಪ ನಿರಾಧಾರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ತಮ್ಮ ಮೇಲಿನ ಆರೋಪ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಯಾರೋ ಒಬ್ಬ ಹೆಣ್ಣು ಮಗಳು ಅನ್ಯಾಯವಾಗಿದೆ ಎಂದು ನನ್ನ ಬಳಿ ಬಂದಿದ್ದರು. ತಾಯಿ- ಮಗಳು ಅನೇಕ ಬಾರಿ ಬಂದು ಹೋಗುತ್ತಿದ್ದರು. ಹೀಗೆ ಬಂದವರ ಬಳಿ ಏನಾಗಿದೆ ಎಂದು ಕೇಳಿದೆ. ಈ ವೇಳೆ ಅವರು ಅನ್ಯಾಯವಾಗಿದೆ ಎಂದು ಹೇಳಿದರು.

ಹೀಗಾಗಿ ನಾನು ಪೊಲೀಸರಿಗೆ ಕರೆ ಮಾಡಿ ನ್ಯಾಯ ಒದಗಿಸುವಂತೆ ಹೇಳಿದೆ. ಆದರೆ, ಮಹಿಳೆ ನನ್ನ ಮೇಲೆಯೇ ಏನೇನೋ ಮಾತಾಡೋಕೆ ಶುರು ಮಾಡಿದಳು ಎಂದು ಹೇಳಿದ್ದಾರೆ.

ನಾನು ಸಹಾಯ ಮಾಡಲು ಪ್ರಯತ್ನಿಸಿದೆ. ಆದರೆ, ಅವರು ನನ್ನ ವಿರುದ್ಧವೇ ಆರೋಪ ಮಾಡಿದ್ದಾರೆ. ಇದನ್ನು ನಿರೀಕ್ಷಿಸಿರಲಿಲ್ಲ ಎಂದು ತಿಳಿಸಿದರು.

ಇದೇ ವೇಳೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಕುರಿತು ವಿಶ್ವಾಸ ವ್ಯಕ್ತಪಡಿಸಿರು. ಪ್ರಸ್ತುತ ವಾತಾವರಣ ಬಿಜೆಪಿ ಪರವಾಗಿದ್ದು, 26 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.