ಬೆಂಗಳೂರು: ಗಲ್ಫ್ ರಾಷ್ಟ್ರಗಳಿಗೆ ಹೆಣ್ಣುಮಕ್ಕಳ ಕಳ್ಳಸಾಗಣೆ ಆರೋಪ; NCPCR ಅಧಿಕಾರಿಗಳ ದಾಳಿ ವೇಳೆ 20 ಬಾಲಕಿಯರ ರಕ್ಷಣೆ!
ಬೆಂಗಳೂರಿನಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ಅನಾಥ ಆಶ್ರಮದ ಮೇಲೆ ದಾಳಿ ನಡೆಸಿದ್ದು ದಾಳಿಯಲ್ಲಿ 20 ಬಾಲಕಿಯರನ್ನು ರಕ್ಷಣೆ ಮಾಡಲಾಗಿದೆ. ಬಾಲಕಿಯರನ್ನು ಗಲ್ಫ್ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ಅನಾಥ ಆಶ್ರಮದ ಮೇಲೆ ದಾಳಿ ನಡೆಸಿದ್ದು ದಾಳಿಯಲ್ಲಿ 20 ಬಾಲಕಿಯರನ್ನು ರಕ್ಷಣೆ ಮಾಡಲಾಗಿದೆ. ಬಾಲಕಿಯರನ್ನು ಗಲ್ಫ್ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಬೆಂಗಳೂರಿನಲ್ಲಿ ಮಾನವ ಕಳ್ಳಸಾಗಣೆ ನಡೆಯುತ್ತಿದೆ ಎಂದು ಎನ್ಸಿಪಿಸಿಆರ್ ದೂರು ಆಧರಿಸಿ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆಗೆ ಮುಂದಾಗಿದ್ದರು. ಮದರಸದಲ್ಲಿ ಸುಮಾರು 10-20 ಮಕ್ಕಳಿದ್ದರು. ಮಕ್ಕಳಿಗೆ ಸರಿಯಾಗಿ ಶಿಕ್ಷಣವನ್ನು ನೀಡುತ್ತಿಲ್ಲ. ಜೊತೆಗೆ ಧಾರ್ಮಿಕ ಶಿಕ್ಷಣವನ್ನು ನೀಡುತ್ತಿದ್ದಾರೆ. ಯಾವುದೇ ಲೈಸೆನ್ಸ್ ಇಲ್ಲದೆ ಮದರಸವನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು.
ಈ ಬಗ್ಗೆ ಪ್ರಿಯಾಂಕ ಕಂಗೂನ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ತನಿಖೆಯ ವೇಳೆ ಬಾಲಕಿಯರನ್ನು ಸಿಡಬ್ಲ್ಯುಸಿ ಮುಂದೆ ಹಾಜರುಪಡಿಸಲು ಮುಂದಾದಾಗ ಸಲ್ಮಾ ಎಂಬುವಳು ಮತ್ತು ಆಕೆಯ ಬಾಸ್ ಶಮೀರ್ ರೌಡಿಗಳನ್ನು ಕರೆಸಿ ಜಗಳಕ್ಕೆ ಯತ್ನಿಸಿದ್ದಾರೆ. ಈ ವೇಳೆ ಪೊಲೀಸರ ಮಧ್ಯಸ್ಥಿಕೆಯಲ್ಲಿ ಗೂಂಡಾಗಳನ್ನು ನಿಯಂತ್ರಿಸಲಾಗಿದೆ. ಪೊಲೀಸರ ಸಲಹೆ ಮೇರೆಗೆ ಮಹಿಳಾ ಅಧಿಕಾರಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಠಾಣೆಗೆ ಬರಲಾಗಿದೆ ಎಂದು ಬರೆದಿದ್ದಾರೆ.
ಸಲ್ಮಾ ಕುವೈತ್‌ನಲ್ಲಿರುವ ಹುಡುಗಿಯರ ಸಂಬಂಧಗಳನ್ನು ಏರ್ಪಡಿಸುತ್ತಾಳೆ ಎಂದು ಸಂತ್ರಸ್ತ ಬಾಲಕಿಯರು ಆರೋಪ ಮಾಡಿದ್ದಾರೆ. ಇನ್ನು ಗಲ್ಫ್ ದೇಶಗಳಲ್ಲಿ, ಮದುವೆಯ ಹೆಸರಿನಲ್ಲಿ ಕಳ್ಳಸಾಗಣೆಗಾಗಿ ಹುಡುಗಿಯರನ್ನು ಶೃಂಗಾರಗೊಳಿಸುವ ಕೆಲಸವನ್ನು ಇಲ್ಲಿ ಮಾಡಲಾಗುತ್ತದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



