ರಾಜ್ಯ

ಬಾಗಲಕೋಟೆ: ಬೈಕ್- ಟಂಟಂ ವಾಹನದ ನಡುವೆ ಅಪಘಾತ, ಇಬ್ಬರ ದುರ್ಮರಣ

ಬೈಕ್ ಹಾಗೂ ಟಂಟಂ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಇಬ್ಬರು ದುರ್ಮರಣ ಹೊಂದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಾಗೂರು ಕ್ರಾಸ್ ಬಳಿ ಘಟನೆ ನಡೆದಿದೆ.

ಬಾಗಲಕೋಟೆ: ಬೈಕ್- ಟಂಟಂ ವಾಹನದ ನಡುವೆ ಅಪಘಾತ, ಇಬ್ಬರ ದುರ್ಮರಣ
ಸಾಂದರ್ಭಿಕ ಚಿತ್ರ
Published On :

ಬಾಗಲಕೋಟೆ: ಬೈಕ್ ಹಾಗೂ ಟಂಟಂ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಇಬ್ಬರು ದುರ್ಮರಣ ಹೊಂದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಾಗೂರು ಕ್ರಾಸ್ ಬಳಿ ಘಟನೆ ನಡೆದಿದೆ.

ಟಂಟಂ ವಾಹನದಲ್ಲಿದ್ದ ಬೇವಿನಮಟ್ಟಿ ಗ್ರಾಮದ ಮೂಲದ ಈರಪ್ಪ ಪವಾಡಗೌಡ (45) ಹಾಗೂ ಬೈಕ್ ಮೇಲಿದ್ದ ಲಿಂಗಸಗೂರು ತಾಲ್ಲೂಕಿನ ಬೋಗಾಪೂರದ ಅಭಿಷೇಕ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಹುನಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಹುನಗುಂದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.