ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ: 'ಕೈ' ಶಾಸಕ ಶ್ರೀನಿವಾಸ್ ವಿರುದ್ಧ ಎಫ್ಐಆರ್
ಟೆಂಡರ್ ಕಾಮಗಾರಿಯಲ್ಲಿನ ಅನ್ಯಾಯ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದು ಕಾಂಗ್ರೆಸ್ ನಾಯಕನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಮೇಲೆ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ತುಮಕೂರು: ಟೆಂಡರ್ ಕಾಮಗಾರಿಯಲ್ಲಿನ ಅನ್ಯಾಯ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದು ಕಾಂಗ್ರೆಸ್ ನಾಯಕನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಮೇಲೆ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಳೆದ ಗುರುವಾರ ರಾತ್ರಿ PWD ಇಲಾಖೆ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕ ರಾಯಸಂದ್ರ ರವಿಕುಮಾರ್ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ರವಿಕುಮಾರ್ ಮೇಲೆ ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ್ ಹಾಗೂ ಬೆಂಬಲಿಗರು ಏಕಾಏಕಿ ಹಲ್ಲೆ ನಡೆಸಿದ್ದರು.
ಹಲ್ಲೆ ಮತ್ತು ಬೆದರಿಕೆ ಹಿನ್ನೆಲೆಯಲ್ಲಿ ರಾಯಸಂದ್ರ ರವಿಕುಮಾರ್ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಎಸ್ ಆರ್ ಶ್ರೀನಿವಾಸ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಐಪಿಸಿ ಸೆಕ್ಷನ್ 511, 506,504,143,149, 323,363 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ಈ ಕುರಿತು ತಿಲಕ್ ಪಾರ್ಕ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



