ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳ: ಬಿಸಿಲಿಗೆ ಬಸವಳಿದ ಬಾನಾಡಿಗಳು, ಬಿಲದಿಂದ ಹೊರಬರುತ್ತಿರುವ ಹಾವುಗಳು!
ನಗರದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರು ಸೇರಿ ಪ್ರಾಣಿ-ಪಕ್ಷಿಗಳೂ ನೀರಿಗಾಗಿ ಪರದಾಡುವಂತಾಗಿದೆ. ವಿಪರೀತ ಸೆಕೆಯಿಂದ ಮನುಷ್ಯರು ಫ್ಯಾನು, ಏಸಿಗಳ ಮೊರೆ ಹೋಗುತ್ತಿದ್ದು, ಪ್ರಾಣಿಗಳು ತಂಪಾದ ಜಾಗವನ್ನು ಹುಡುಕಿಕೊಂಡು ಹೊರ ಬರುತ್ತಿವೆ.

ಬೆಂಗಳೂರು: ನಗರದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರು ಸೇರಿ ಪ್ರಾಣಿ-ಪಕ್ಷಿಗಳೂ ನೀರಿಗಾಗಿ ಪರದಾಡುವಂತಾಗಿದೆ. ವಿಪರೀತ ಸೆಕೆಯಿಂದ ಮನುಷ್ಯರು ಫ್ಯಾನು, ಏಸಿಗಳ ಮೊರೆ ಹೋಗುತ್ತಿದ್ದು, ಪ್ರಾಣಿಗಳು ತಂಪಾದ ಜಾಗವನ್ನು ಹುಡುಕಿಕೊಂಡು ಹೊರ ಬರುತ್ತಿವೆ. ಬಿಸಿಲ ದಗೆ ತಾಳಲಾರದೆ ಹಾವುಗಳು ಬಿಲಗಳಿಂದ ಹೊರಬರುತ್ತಿದ್ದು, ಈ ಬೆಳವಣಿಗೆ ಆತಂಕಕ್ಕೆ ಕಾರಣವಾಗಿದೆ.
ಬಿಬಿಎಂಪಿ ವನ್ಯಜೀವಿ ವಾರ್ಡನ್ ಪ್ರಸನ್ನಕುಮಾರ್ ಮಾತನಾಡಿ, ಈ ಬಾರಿಯ ಬೇಸಿಗೆಯಲ್ಲಿ ಸಹಾಯವಣಿ ಸಂಖ್ಯೆಗೆ ಹೆಚ್ಚಿನ ಕರೆಗಳು ಬರುತ್ತಿರುವೆ ರಕ್ಷಣಾ ಕಾರ್ಯಗಳ ಸಂಖ್ಯೆಯಲ್ಲಿಯೂ ಹೆಚ್ಚಳಗಳು ಕಂಡು ಬಂದಿವೆ. ಇಲಾಖೆಗೆ ಪ್ರತಿದಿನ ಕನಿಷ್ಠ 100 ಕರೆಗಳು ಬರುತ್ತಿವೆ, ಕಳೆದ ಎರಡು ವಾರಗಳ ಹಿಂದೆ 45 ಕರೆಗಳು ಬರುತ್ತಿತ್ತು. ಆದರೀಗ ಈ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಆಗಸದಲ್ಲಿ ಹಾರಾಡುವ ಪಕ್ಷಿಗಳು ನಿರ್ಜಲೀಕರಣದಿಂದಾಗಿ ಕೆಳಗೆ ಬೀಳುತ್ತಿವೆ. ಮೈನಾ, ಕಾಗೆಯಂತಹ ಪಕ್ಷಗಳು ಕೆಳಗೆ ಬೀಳುತ್ತಿವೆ. ಕೆಳಗೆ ಬಿದ್ದ ಪಕ್ಷಿಗಳ ರಕ್ಷಣ ಮಾಡುವಂತೆ ಆರ್ ಆರ್ ನಗರ ವಲಯ, ಯಲಹಂಕ ಮತ್ತು ದಾಸರಹಳ್ಳಿ ವಲಯದಿಂದ ಹೆಚ್ಚಿನ ಕರೆಗಳು ಬರುತ್ತಿವೆ. ಉದ್ಯಾನವನಗಳು ಹಾಗೂ ಅಡುಗೆ ಮನೆಗಳಲ್ಲಿ ಹಾವು ಕಾಣಿಸಿಕೊಳ್ಳುತ್ತಿರುವ ಕುರಿತು ಕರೆಗಳು ಬರುತ್ತಿವೆ.
ಬಿಸಿಲು ಹೆಚ್ಚಾದ ಹಿನ್ನೆಲೆಯಲ್ಲಿ ತಂಪಾದ ಜಾಗಗಳನ್ನು ಹುಡುಕಿಕೊಂಡು ಹಾವುಗಳು ಬಿಲಗಳಿಂದ ಹೊರ ಬರುತ್ತಿವೆ. ಇದರಲ್ಲಿ ಭಯಪಡುವ ಅಗತ್ಯವಿಲ್ಲ. ಈ ಹಾವುಗಳನ್ನು ತಾವೇ ನಿಭಾಯಿಸುವ ಬದಲು ಬಿಬಿಎಂಪಿ ನಿಯಂತ್ರಣ ಕೊಠಡಿಗೆ ಜನರು ಕರೆ ಮಾಡಬೇಕೆಂದು ಸಲಹೆ ನೀಡಿದ್ದಾರೆ.
ಪೀಪಲ್ ಫಾರ್ ಅನಿಮಲ್ (ಪಿಎಫ್‌ಎ) ಜನರಲ್ ಮ್ಯಾನೇಜರ್ ಕರ್ನಲ್ ನವಾಜ್ ಷರೀಫ್ ಅವರು ಮಾತನಾಡಿ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.20ರಷ್ಟು ಹೆಚ್ಚು ದೂರವಾಣಿ ಕರೆಗಳು ಬರುತ್ತಿವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



